ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ, ರಾಷ್ಟ್ರೀಯ ಐಕ್ಯತಾ ದಿನದ ಪ್ರಯುಕ್ತ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಕರೆಯಂತೆ ನಡೆದ ಏಕತಾ ಓಟವನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಉದ್ಘಾಟಿಸಿದರು. 
ಜಿಲ್ಲೆ

ಸರ್ದಾರ್ ಪಟೇಲ್‌ಜನ್ಮದಿನದಂಗವಾಗಿ ಏಕತಾ ಓಟ ಸಂಪನ್ನ

ಮಂಗಳೂರು: ಉಕ್ಕಿನ ಮನುಷ್ಯ ಎಂದೇ ಬಿರುದಾಂಕಿತರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ, ರಾಷ್ಟ್ರೀಯ ಐಕ್ಯತಾ ದಿನದ ಪ್ರಯುಕ್ತ ಮಂಗಳ ಕ್ರೀಡಾಂಗಣದಿಂದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸರ್ಕಲ್ ವರೆಗೆ (ನವಭಾರತ್ ಸರ್ಕಲ್) ರನ್ ಫಾರ್ ಯೂನಿಟಿ ಕಾರ್ಯಕ್ರಮ ಮಂಗಳವಾರ ಸಂಪನ್ನಗೊಂಡಿತು.

ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಕರೆಯಂತೆ ನಡೆದ ಏಕತಾ ಓಟವನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಉದ್ಘಾಟಿಸಿದರು. ಮೇಯರ್ ಮನೋಜ್ ಕೋಡಿಕಲ್, ಮಾಜಿ ಮೇಯರ್ ಸುಧೀರ್‌ರ್ ಶೆಟ್ಟಿ ಕಣ್ಣೂರು, ರವಿಶಂಕರ್ ಮಿಜಾರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಮಾಜಿ ಎಂಎಲ್‌ಸಿ ಪ್ರತಾಪ್ ಸಿಂಹ ನಾಯಕ್, ಪಾಲಿಕೆ ಸದಸ್ಯರಾದ ಶಕಿಲಾ ಕಾವ, ಕಿರಣ್ ಕುಮಾರ್ ಉಪಸ್ಥಿತರಿದ್ದರು.

ಈ ಬಾರಿ ಪ್ರಸಾರವಾದ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ದೇಶದ ಏಕತೆಯ ಮಂತ್ರದ ಜೊತೆಗೆ ಗರಿಷ್ಟ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಫಿಟ್‌ನೆಸ್ ಮಂತ್ರವನ್ನು ಎಲ್ಲೆಡೆ ಹರಡುವಂತೆ ಕರೆ ನೀಡಿದ್ದರು.