ಬೆಳಗಾವಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭವಿಷ್ಯದ ಯುವ ಮತದಾರರಲ್ಲಿ ಚುನಾವಣೆ ಮತ್ತು ಮತದಾನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸಲು ವಿದ್ಯಾರ್ಥಿಗಳಿಗೆ ಪ್ರೌಡ ಶಾಲಾ/ಪದವಿಪೂರ್ವ/ಸ್ನಾತಕೋತ್ತರ ಹಂತದಲ್ಲಿ ಪ್ರಬಂಧ ಸ್ಪರ್ಧೆ, ಭಿತ್ತಿ ಚಿತ್ರ, ರಸಪ್ರಶ್ನೆ ಹಾಗೂ ವಿವಿಧ ರೀತಿಯ ಸ್ಫರ್ಧೆಗಳನ್ನು ಆಯೋಜಿಸಿ, ಜಿಲ್ಲಾ ಮಟ್ಟದಲ್ಲಿ ನವೆಂಬರ ಕೊನೆಯ ವಾರದಲ್ಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲು ತಾಲೂಕಾ ಮಟ್ಟದಲ್ಲಿ ವಿಜೇತ ವಿದ್ಯಾರ್ಥಿಗಳ ಪಟ್ಟಿಯನ್ನು ಸಲ್ಲಿಸಲು ಅಧ್ಯಕ್ಷರು, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಪಂ ಸಿಇಒ ರಾಹುಲ್ ಶಿಂಧೆ ರವರು ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸ್ವೀಪ್ ನೋಡಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಜಿಲ್ಲಾ ಪಂಚಾಯತ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ 2024-25 ನೇ ಸಾಲಿನ “ರಾಷ್ಟ್ರೀಯ ಮತದಾರರ ದಿನಾಚರಣೆ”ಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಧ್ಯಕ್ಷರು, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಪಂ ಸಿಇಒ ರಾಹುಲ್ ಶಿಂಧೆ ರವರು ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಶಾಲಾ/ಕಾಲೇಜು, ತಾಲೂಕು, ಜಿಲ್ಲಾ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ಆಯೋಜಿಸಿ ಭವಿಷ್ಯದ ಯುವ ಮತದಾರರಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವುದು ಅತೀ ಅವಶ್ಯಕವಾಗಿದೆ. ಪ್ರತಿ ವರ್ಷವೂ 25ನೇ ಜನವರಿಯಂದು “ರಾಷ್ಟ್ರೀಯ ಮತದಾರರ ದಿನಾಚರಣೆ” ಆಯೋಜಿಸಲಾಗುತ್ತಿದ್ದು, ಸದರಿ ದಿನದಂದು ಹೊಸ/ಯುವ ಮತದಾರರಿಗೆ ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿ ನೀಡಿ ಮತದಾರರ ಸಾಕ್ಷರತೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಎಲ್ಲ ಪ್ರೌಡ ಶಾಲಾ/ಪದವಿಪೂರ್ವ/ಸ್ನಾತಕೋತ ಕಾಲೇಜುಗಳು “ಮತದಾರರ ಸಾಕ್ಷರತಾ ಸಂಘ” (Electoral Literacy Clubs) ಗಳ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ತಾವೂಗಳು ತಾಲೂಕಾ ಮಟ್ಟದಲ್ಲಿ ಹಮ್ಮಿಕೊಂಡಂತಹ ವಿವಿಧ ಸ್ಫರ್ಧೆಯ ವಿಜೇತ ವಿದ್ಯಾರ್ಥಿಗಳ( ಪ್ರಥಮ, ದ್ವೀತಿಯ ಮತ್ತು ತೃತೀಯ) ಮಾಹಿತಿಯನ್ನು ಕೂಡಲೇ ಜಿಲ್ಲಾ ಪಂಚಾಯತಗೆ ಒದಗಿಸಲು ಸೂಚಿಸಿದರು. ಅದೇ ರೀತಿ ನವೆಂಬರ ಕೊನೆಯ ವಾರದಲ್ಲಿ ಜಿಲ್ಲಾ ಮಟ್ಟದ ಸ್ಫರ್ಧೆಯನ್ನು ಹಮ್ಮಿಕೊಳ್ಳಲು ಸೂಕ್ತ ನಿರ್ದೇಶ ನೀಡಿದರು.
ಸದರಿ ಸಭೆಯಲ್ಲಿ ಸ್ವೀಪ ನೋಡಲ್ ಅಧಿಕಾರಿ ಮತ್ತು ಯೋಜನಾ ನಿರ್ದೇಶಕರು ರವಿ ಬಂಗಾರೆಪ್ಪನ್ನವರ ಜಿಲ್ಲಾ ಪಂಚಾಯತ ಬೆಳಗಾವಿ, ಕುಲಸಚಿವರು ಸಂತೋಷ ಕಾಮಗೌಡರ ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯ ಬೆಳಗಾವಿ, ಉಪ ನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಮಹಾದೇವ ಎಂ. ಕಾಂಬಳೆ, ಜಿಲ್ಲಾ/ತಾಲೂಕಾ ಮಟ್ಟದ ಸ್ವೀಪ್ ನೋಡಲ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ವರ್ಗದವರು ಹಾಜರಿದ್ದರು.