ಜಿಲ್ಲೆ

ತಮ್ಮನಿಗೆ ಕರೊನಾ ಸೋಂಕು ದೃಢವಾದ ಬೆನ್ನಲ್ಲೇ ನೇಣಿಗೆ ಶರಣಾದ ಅಣ್ಣ

ಕೋಲಾರ: ತಮ್ಮನಿಗೆ ಕರೊನಾ ಸೋಂಕು ತಗುಲಿದ್ದರಿಂದ ಆಘಾತಗೊಂಡು ಅಣ್ಣನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದ ಗಾಂಧಿನಗರದಲ್ಲಿ ಶನಿವಾರ ರಾತ್ರಿ ನಡೆದಿದೆ.

ನಾಗರಾಜ್​ (37) ಮೃತ ದುರ್ದೈವಿ. ನಿನ್ನೆ ಸಂಜೆ ತಮ್ಮನಿಗೆ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಅಣ್ಣನಿಗೆ ತಮ್ಮ ವಿಚಾರ ತಿಳಿದಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬಸ್ಥರಿಗೂ ಕರೊನಾ ತಗಲಿರುವ ಆತಂಕದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕಿಸಲಾಗಿದ್ದು, ಗಲ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)