ಜಿಲ್ಲೆ

ವೃದ್ಧರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿ

ಕಿಕ್ಕೇರಿ: ಹೋಬಳಿಯ ಐಕನಹಳ್ಳಿ ಗ್ರಾಮದ ಹೊರವಲಯದ ತೋಟದ ಮನೆಗೆ ಗುರುವಾರ ದುಷ್ಕರ್ಮಿಗಳು ನುಗ್ಗಿ ಒಡವೆ ದೋಚಿ ಪರಾರಿಯಾಗಿದ್ದಾರೆ.

ತೋಟದ ಮನೆಯಲ್ಲಿ ವೃದ್ಧ ದಂಪತಿ ರಾಮೇಗೌಡ, ನಿಂಗಮ್ಮ ವಾಸವಾಗಿದ್ದರು. ಗುರುವಾರ ಮನೆಗೆ ನುಗ್ಗಿದ ದುಷ್ಕರ್ಮಿಗಳು ವೃದ್ಧ ದಂಪತಿ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಚಿನ್ನದ ಮಾಂಗಲ್ಯ ಸರ, ಓಲೆ, ಬಳೆ ಕಸಿದುಕೊಂಡು ಪರಾರಿಯಾಗಿದ್ದಾರೆ. ಕಿಕ್ಕೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.