-ಅಂಚೆ ಮತಗಳ ಎಣಿಕೆ ಆರಂಭಕ್ಕೆ ಕ್ಷಣಗಣನೇ
ಬೆಳಗಾವಿ:ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿರುವ ಬೆಳಗಾವಿ ನಗರದ ಆರ್.ಪಿ.ಡಿ. ಮಹಾವಿದ್ಯಾಲಯದ ಆವರಣದಲ್ಲಿ ಬಿಗಿ ಭದ್ರತೆ.
ಮತ ಎಣಿಕೆ ಆರಂಭಕ್ಕೆ ಮುನ್ನ ಮತಯಂತ್ರಳನ್ನು ಇರಿಸಿದ ಸ್ಟ್ರಾಂಗ್ ರೂಮ್ ಗಳನ್ನು ಚುನಾವಣಾ ವೀಕ್ಷಕರು, ಉಮೇದುವಾರರು ಹಾಗೂ ಚುನಾವಣಾ ಏಜೆಂಟರುಗಳ ಸಮ್ಮುಖದಲ್ಲಿ ತೆರೆಯಲಾಯಿತು.
ಬೆಳಗ್ಗೆ 8 ಗಂಟೆಯಿಂದ ಇವಿಎಂ ಮತ ಎಣಿಕೆ ಕಾರ್ಯ ಆರಂಭಿಸಲಾಗುವುದು. ಅಂಚೆ ಮತಗಳ ಎಣಿಕೆಗೆ ಎರಡು ಪ್ರತ್ಯೇಕ ಕೊಠಡಿಗಳನ್ನು ಸ್ಥಾಪಿಸಲಾಗಿದೆ.ತಾಂತ್ರಿಕ ತೊಂದರೆ ನಿರ್ವಹಣೆಗೆ ಚುನಾವಣಾ ಆಯೋಗವು ಎಂಟು ಜನ ತಂತ್ರಜ್ಞರನ್ನು ನಿಯೋಜಿಸಿದೆ.
ಇದುವರೆಗೆ ಪೋಸ್ಟಲ್ ಬ್ಯಾಲೆಟ್ -11,148 ಮತಗಳು ಬಂದಿರುತ್ತವೆ. ಮತ ಎಣಿಕೆಯ ದಿನ ಬೆಳಿಗ್ಗೆ 8 ಗಂಟೆಯವರೆಗೂ ಪೋಸ್ಟಲ್ ಬ್ಯಾಲೆಟ್ ಗಳನ್ನು ಸ್ವೀಕರಿಸಲಾಗಿದೆ.
ಮತ ಎಣಿಕೆಗಾಗಿ ಒಟ್ಟಾರೆ 552 ಜನ ಮೇಲ್ವಿಚಾರಕು/ಮೈಕ್ರಾಒ ಅಬ್ಸರ್ವರ್ ಹಾಗೂ ಮತ ಎಣಿಕೆ ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 14 ಜನರು ಹಾಗೂ ಮೂವರು ಹೆಚ್ಚುವರಿ ಸಿಬ್ಬಂದಿಯನ್ನು ನೇಮಿಸಲಾಗಿರುತ್ತದೆ.
ಮತ ಎಣಿಕಾ ಕೇಂದ್ರದಲ್ಲಿ ಉಪಸ್ಥಿತರಿರುವ ಏಜೆಂಟರಿಗೆ ನಮೂನೆ 7 ರಲ್ಲಿನ ಆದ್ಯತೆಯಂತೆ ಆಸನ ವ್ಯವಸ್ಥೆ ಕಲ್ಪಿಸಲಾಗುವುದು.
ಶೇ.71.49 ರಷ್ಟು ಮತದಾನ:
ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಒಟ್ಟಾರೆ ಶೇ.71.49 ರಷ್ಟು ಮತದಾನವಾಗಿರುತ್ತದೆ. ಒಟ್ಟು 19,23,788 ಮತದಾರರ ಪೈಕಿ 13,75,383 ಜನರು ಮತ ಚಲಾಯಿಸಿರುತ್ತಾರೆ.
ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರ ಸುಗಮ ಹಾಗೂ ಪಾರದರ್ಶಕ ಮತ ಎಣಿಕೆಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಪೊಲೀಸ್ ಬಿಗಿ ಭದ್ರತೆ:
ನಗರದಲ್ಲಿ 300 ಕಡೆಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಡ್ರೋನ್ ಮೂಲಕವೂ ನಿಗಾ ವಹಿಸಲಾಗುತ್ತದೆ.
ಮತ ಎಣಿಕೆ ಕೇಂದ್ರದಲ್ಲಿ ಇಬ್ಬರು ಡಿಸಿಪಿ ನೇತೃತ್ವದಲ್ಲಿ 13 ಇನ್ಸಪೆಕ್ಟರ್ ಗಳು ಕಾರ್ಯನಿರ್ವಹಿಸಲಿದ್ದಾರೆ. ಸುಗಮ ಸಂಚಾರ, ಪಾರ್ಕಿಂಗ್ ಸೇರಿದಂತೆ ಪ್ರತಿಯೊಂದು ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ.
.