ಜೆ. ಶ್ರೀನಿವಾಸ್ 
ಜಿಲ್ಲೆ

ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಆಯ್ಕೆ

ಯಳಂದೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಪ್ರವಾಸಿ ತಾಣವಾಗಿರುವ ಬಿಳಿಗಿರಿರಂಗನಬೆಟ್ಟದ ಬಿಳಿಗಿರಿರಂಗನಾಥಸ್ವಾಮಿ ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಪಟ್ಟಣ ಪಂಚಾಯಿತಿಯ ಮಾಜಿ ಸದಸ್ಯ ಜೆ.ಶ್ರೀನಿವಾಸ್ ಆಯ್ಕೆಯಾಗಿದ್ದಾರೆ.

ಪ್ರಧಾನ ಅರ್ಚಕರೂ ಸೇರಿದಂತೆ ಒಟ್ಟು 9 ಸದಸ್ಯರಿರುವ ಈ ಸಮಿತಿಯಲ್ಲಿ ಜೆ.ಶ್ರೀನಿವಾಸ್ ಆಯ್ಕೆಯಾಗಿದ್ದಾರೆ. ನನಗೆ ನೀಡಿರುವ ಜವಾಬ್ದಾರಿಯನ್ನು ನಾನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಶ್ರೀನಿವಾಸ್ ತಿಳಿಸಿದ್ದಾರೆ.