ಜಿಲ್ಲೆ

ಅಂತಾರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆ

ಹುಬ್ಬಳ್ಳಿ : ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ 45ನೇ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನಶಿಪ್​ನಲ್ಲಿ ಭಾಗವಹಿಸಿದ್ದ ನೈಋತ್ಯ ರೈಲ್ವೆಯ ಉದ್ಯೋಗಿ ಪ್ರಮೋದ ಹರಿ ನಾಯ್ಕ ಅವರು ಶಾಟ್​ಫುಟ್​ನಲ್ಲಿ ಚಿನ್ನದ ಪದಕ ಹಾಗೂ ಡಿಸ್ಕಸ್ ಥ್ರೋನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

ಹುಬ್ಬಳ್ಳಿಯವರಾದ ಇವರು, ಇಂಡೋನೇಷ್ಯಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಾಸ್ಟರ್ಸ್ ಹ್ಯಾಮರ್ ಥ್ರೋ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.