ಜಿಲ್ಲೆ

ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿಗೆ ಆಯ್ಕೆ

ಮಂಗಳೂರು: ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ವಿಜಯವಾಣಿ ಹಿರಿಯ ವರದಿಗಾರ ಪಿ.ಬಿ.ಹರೀಶ್ ರೈ ಆಯ್ಕೆಯಾಗಿದ್ದಾರೆ. ಇವರು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದು, ಭಾರತೀಯ ರೆಡ್‌ಕ್ರಾಸ್ ಸೊಸೈಟಿ ದ.ಕ. ಜಿಲ್ಲಾ ಘಟಕದ ಆಡಳಿತ ಮಂಡಳಿ ನಿರ್ದೇಶಕ ಹಾಗೂ ಮಂಗಳೂರು ಪ್ರೆಸ್ ಕ್ಲಬ್‌ನ ಉಪಾಧ್ಯಕ್ಷರಾಗಿದ್ದಾರೆ.