ಚಿದಾನಂದ ಮಾಣೆ ರಟ್ಟಿಹಳ್ಳಿ
ಪಟ್ಟಣ ಪಂಚಾಯಿತಿ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ 5 ವರ್ಷಗಳ ಬಳಿಕ ರಟ್ಟಿಹಳ್ಳಿಯಲ್ಲಿ ನಡೆಯುತ್ತಿರುವ ಚೊಚ್ಚಲ ಚುನಾವಣೆಗೆ ರಾಷ್ಟ್ರೀಯ ಪಕ್ಷಗಳ ಜತೆಗೆ ಸ್ಥಳೀಯ ಮುಖಂಡರೂ ಭರ್ಜರಿ ತಾಲೀಮು ನಡೆಸಿದ್ದಾರೆ.
ರಾಜ್ಯ ಸರ್ಕಾರ 2020ರಲ್ಲಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿದ ಬಳಿಕ ಚುನಾವಣೆಯೇ ನಡೆದಿರಲಿಲ್ಲ. ಹೀಗಾಗಿ ಕಳೆದ 5 ವರ್ಷಗಳಿಂದ ತಹಸೀಲ್ದಾರರು ಆಡಳಿತಾಧಿಕಾರಿಯಾಗಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಪಟ್ಟಣದ ಅಭಿವದ್ಧಿ ಕಾರ್ಯಗಳನ್ನು ನಿರ್ವಹಿಸುತ್ತಿದ್ದರು. ಪಟ್ಟಣದ ಸರ್ವಾಂಗೀಣ ಪ್ರಗತಿಗೆ ಜನಪ್ರತಿನಿಧಿಗಳ ಆಯ್ಕೆ ತುಂಬಾ ಅಗತ್ಯವಾಗಿತ್ತು. ಹೀಗಾಗಿ ಮತದಾರರು ಚುನಾವಣೆಗಾಗಿ ಚಾತಕಪಕ್ಷಿಯಂತೆ ಕಾಯುತ್ತಿದ್ದರು.
ಈಗ ಚುನಾವಣೆಗೆ ಅಖಾಡ ಸಿದ್ಧವಾಗಿದ್ದು ಸ್ಥಳೀಯರು ತಮ್ಮ ನಾಯಕನ ಆಯ್ಕೆಯ ಹುಮ್ಮಸ್ಸಿನಲ್ಲಿದ್ದಾರೆ. ಜತೆಗೆ ರಾಜಕೀಯ ಮುಖಂಡರು ಗೆಲುವಿಗಾಗಿ ತೆರೆಮರೆಯಲ್ಲಿ ತಂತ್ರ-ಪ್ರತಿತಂತ್ರಗಳನ್ನು ಹೆಣೆಯುತ್ತಿದ್ದಾರೆ.
ರಟ್ಟಿಹಳ್ಳಿ ಪಟ್ಟಣದಲ್ಲಿ 2011ರ ಜನಗಣತಿ ಆಧರಿಸಿ ಪಟ್ಟಣ ಪಂಚಾಯಿತಿಗೆ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಿ ಪ್ರಾಥಮಿಕ ಅಧಿಸೂಚನೆಯನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ 2022 ಜನವರಿ 18 ರಂದು ಪ್ರಕಟಿಸಿದೆ. 2025 ೆಬ್ರವರಿಯಲ್ಲಿ ಪಟ್ಟಣದಲ್ಲಿ ಒಟ್ಟು 15 ವಾರ್ಡ್‌ಗಳನ್ನಾಗಿ ವಿಂಗಡಿಸಿ ಈಗಾಗಲೇ ಮೀಸಲಾತಿಯನ್ನೂ ನಿಗದಿಪಡಿಸಲಾಗಿದೆ.
ಚುನಾವಾಣ ವೇಳಾಪಟ್ಟಿ
ಜು.29ಕ್ಕೆ ಜಿಲ್ಲಾಧಿಕಾರಿಯಿಂದ ಚುನಾವಣೆ ಅಧಿಸೂಚನೆ ಪ್ರಕಟಿಸಲಾಗುತ್ತದೆ. ಆಗಸ್ಟ್ 5ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಆ. 6ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಆ. 8 ಕೊನೆಯ ದಿನವಾಗಿದೆ. ಆ.17ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5ಗಂಟೆಯವರೆಗೆ ಮತದಾನ ನಡೆಯಲಿದೆ. ಅಗತ್ಯವಿದ್ದಲ್ಲಿ ಆ. 19ರಂದು ಮರುಮತದಾನ ನಡೆಯಲಿದೆ. ಆ.20ರಂದು ತಾಲೂಕಿನ ಕೇಂದ್ರ ಸ್ಥಳದಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.
ತೆರೆಮರೆಯಲ್ಲಿ ತಂತ್ರ-ಪ್ರತಿತಂತ್ರ ಚುನಾವಣಾ ಆಯೋಗ ಪ.ಪಂ.ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಇತ್ತೀಚಿಗೆ ಆದೇಶ ಹೊರಡಿದ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಬಿಜೆಪಿ ಪಾಳಯದಲ್ಲಿ ಭಾರಿ ತಾಲೀಮು ನಡೆದಿದೆ. ಉಭಯ ಪಕ್ಷಗಳ ಆಕಾಂಕ್ಷಿಗಳು ತಮ್ಮ ತಮ್ಮ ವಾರ್ಡ್‌ಗಳಲ್ಲಿ ಮನೆಮನೆಗಳಿಗೆ ಭೇಟಿ ನೀಡಿ ಮತಬೇಟೆ ಆರಂಭಿಸಿದ್ದಾರೆ. ಎರುಡೂ ಪಕ್ಷಗಳಲ್ಲಿ ಆಕಾಂಕ್ಷಿಗಳ ದಂಡು ಹೆಚ್ಚಾಗಿದ್ದು ಟಿಕೆಟ್‌ಗಾಗಿ ಭಾರಿ ಕಸರತ್ತು ನಡೆಸಿದ್ದಾರೆ. ಮಾಜಿ ಸಚಿವ ಬಿ.ಸಿ. ಪಾಟೀಲ ಅವರು ಈಗಾಗಲೇ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ರಣತಂತ್ರ ರೂಪಿಸಿದ್ದಾರೆ. ಇತ್ತ ಕೈ ಪಾಳಯದಲ್ಲೂ ಟಿಕೆಟ್ ಆಕಾಂಕ್ಷಿಗಳು ತಮ್ಮ ವಾರ್ಡ್‌ಗಳಲ್ಲಿನ ಮತದಾರರ ಕೆಲವು ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅವರನ್ನು ತಮ್ಮತ್ತ ಸೆಳೆಯುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ಈ ಮಧ್ಯೆ ರಾಷ್ಟ್ರೀಯ ಪಕ್ಷಗಳಿಗೆ ಸಡ್ಡುಹೊಡೆದಿರುವ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಂಕ್ರಗೌಡ ಚೆನ್ನಗೌಡ್ರು ‘ಸ್ವಾಭಿಮಾನಿ ಜನಹಿತ ವೇದಿಕೆ’ ಹೆಸರಿನಲ್ಲಿ ಚುನಾವಣೆಯ ಅಖಾಡಕ್ಕಿಳಿಯಲು ಭರ್ಜರಿ ತಯಾರಿ ನಡೆಸಿದ್ದಾರೆ. ಪಪಂನ ಎಲ್ಲ 15 ವಾರ್ಡ್‌ಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ತಿಳಿಸಿದ್ದಾರೆ. ಹೀಗಾಗಿ ಚೊಚ್ಚಲ ಚುನಾವಣೆಯಲ್ಲೇ ತ್ರಿಕೋನ ಸ್ಪರ್ಧೆ ನಡೆಯುವ ಲಕ್ಷಣಗಳು ಗೋಚರಿಸಿವೆ.
ರಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಚುನಾವಣೆಯ ವೇಳಾಪಟ್ಟಿ ಪ್ರಕಟವಾಗಿದ್ದು ಆಗಸ್ಟ್ 17ಕ್ಕೆ ಮತದಾನ ನಡೆಯಲಿದೆ. ಈಗಾಗಲೇ ಎಲ್ಲ ಬಿಎಲ್‌ಒಗಳೊಂದಿಗೆ ಸಭೆ ನಡೆಸಿ ಚುನಾವಣೆಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 15 ವಾರ್ಡ್‌ಗಳಲ್ಲಿ ಮತದಾನ ಕೇಂದ್ರಗಳನ್ನು ನಿರ್ಮಿಸಲಾಗುತ್ತದೆ ಅಲ್ಲದೆ, 1500ಕ್ಕೂ ಹೆಚ್ಚು ಮತದಾರರು ಇರುವ ವಾರ್ಡ್‌ಗಳಲ್ಲಿ ಎರಡು ಮತದಾನ ಕೇಂದ್ರಗಳ ವ್ಯವಸ್ಥೆ ಮಾಡಲಾಗುತ್ತದೆ. ಶ್ವೇತಾ ಅಮರಾವತಿ, ತಹಸೀಲ್ದಾರ್, ರಟ್ಟಿಹಳ್ಳಿ ರಟ್ಟಿಹಳ್ಳಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆಡಳಿತ ಮಂಡಳಿಯ ಅವಶ್ಯಕತೆ ಇತ್ತು. ಈಗ ಚುನಾವಣೆ ೋಷಣೆಯಾಗಿರುವುದು ಸಂತಸ ಮೂಡಿಸಿದೆ. ಪ.ಪಂ.ಚುನಾವಣೆಯನ್ನು ಎಲ್ಲ ಮತದಾರರು ಯಾವುದೇ ದ್ವೇಷದ ವಾತವರಣ ಉಂಟಾಗದಂತೆ ಶಾಂತಿಯುತವಾಗಿ ಚುನಾವಣೆಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಯು.ಬಿ. ಬಣಕಾರ, ಶಾಸಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ ಅವರ ಆಡಳಿತಾವಧಿಯಲ್ಲಿ ಸ್ಥಳೀಯರು ಹಾಗೂ ನಾವು ಸಲ್ಲಿಸಿದ ಮನವಿಯ ಮೇರೆಗೆ ಸ್ಥಳೀಯ ಪಟ್ಟಣ ಪಂಚಾಯಿತಿಯಾಗಿ ರಟ್ಟಿಹಳ್ಳಿ ಪಟ್ಟಣವನ್ನು ಮೇಲ್ದರ್ಜೆಗೇರಿಸಲಾಯಿತು. ಸದ್ಯ ಚುನಾವಣೆ ಘೋಷಣೆ ಮಾಡಲಾಗಿದ್ದು ಪಟ್ಟಣದ ಎಲ್ಲ 15 ವಾರ್ಡ್‌ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ. ರಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಪ್ರಥಮ ಚುನಾವಣೆಯ ಅಧಿಕಾರವನ್ನು ಬಿಜೆಪಿ ತನ್ನ ತೆಕ್ಕೆಗೆ ಪಡೆದುಕೊಳ್ಳಲಿದೆ. ಬಿ.ಸಿ. ಪಾಟೀಲ, ಮಾಜಿ ಸಚಿವ