ಸಣ್ಣಪುಲಿಕೋಟು ಗ್ರಾಮದ ರಸ್ತೆ ದುಸ್ಥಿತಿಯಲ್ಲಿರುವುದು.   
ಜಿಲ್ಲೆ

ರಸ್ತೆ ದುರಸ್ತಿಪಡಿಸದಿದ್ದರೆ ಚುನಾವಣೆ ಬಹಿಷ್ಕಾರ

ಮಾದೇಶ್ ತಿ.ನರಸೀಪುರ

ನಾಪೋಕ್ಲು: ಸಮೀಪದ ಸಣ್ಣಪುಲಿಕೋಟು ಗ್ರಾಮದ ರಸ್ತೆ ದುಸ್ಥಿತಿ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು, ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಇಲ್ಲಿನ 3 ಕಿ.ಮೀ.ರಸ್ತೆ ಗುಂಡಿಗಳಿಂದ ಕೂಡಿದ್ದು ಸಂಚಾರ ದುಸ್ತರವಾಗಿದೆ. ಮಳೆಯಿಂದಾಗಿ ರಸ್ತೆ ಕೆಸರುಮಯವಾಗಿದ್ದು, ನಡೆದಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಗ್ರಾಮದಲ್ಲಿ ಎಸ್‌ಸಿ, ಎಸ್‌ಟಿ ಸೇರಿದಂತೆ ವಿವಿಧ ಜನಾಂಗದ 80 ಕುಟುಂಬಗಳು ವಾಸ ಮಾಡುತ್ತಿವೆ. ರಸ್ತೆ ಸರಿಪಡಿಸುವಂತೆ ಹಲವು ಬಾರಿ ಶಾಸಕರಿಗೆ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆತಿಲ್ಲ. ರಸ್ತೆ ದುಸ್ಥಿತಿಯನ್ನು ಸರಿಪಡಿಸದಿದ್ದಲ್ಲಿ ಮುಂದಿನ ಚುನಾವಣೆಗೆ 80 ಕುಟುಂಬಗಳ ಮತದಾನ ಬಹಿಷ್ಕರಿಸುವುದಾಗಿ ಗ್ರಾಮಸ್ಥರ ಪರವಾಗಿ ಕಾವೇರಿ ಮನೆ ಭರತ್ ತಿಳಿಸಿದ್ದಾರೆ.