ರಟ್ಟಿಹಳ್ಳಿ: ಇಲ್ಲಿಯ ಪಟ್ಟಣ ಪಂಚಾಯಿತಿ ಚುನಾವಣೆಯ ಮತದಾನದ ದಿನದಂದು ಬಿಜೆಪಿಗೆ ಮತ ಹಾಕುವಂತೆ ಹೇಳಿ ಹಣ ಹಂಚಿಕೆ ಮಾಡಿದ ಆರೋಪದಡಿ ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ವಾರ್ಡ್ 9ರಲ್ಲಿ ಯಾರೋ ಇಬ್ಬರು ಬಿಜೆಪಿಗೆ ಮತ ಹಾಕುವಂತೆ ಹೇಳಿ ಹಣ ಹಂಚಿಕೆ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಎಂಸಿಸಿ ಸ್ಕ್ತ್ರಾ್ವಡ್ನ ಅಧಿಕಾರಿ ರವಿ ಎನ್. ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.