ಜಿಲ್ಲೆ

ಹೊಸಕೋಟೆ ಸಹಕಾರ ಸಂಘಕ್ಕೆ ನಿರ್ದೇಶಕರ ಆಯ್ಕೆ

ಆಲೂರು: ಹೊಸಕೋಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು.

23 ನಾಮಪತ್ರ ಸಲ್ಲಿಕೆಯಾಗಿದ್ದು, ಚುನಾವಣೆ ಮೂಲಕ ನೂತನ ನಿರ್ದೇಶಕರ ಆಯ್ಕೆ ಮಾಡಲಾಯಿತು.

ಸಾಮಾನ್ಯ ಕ್ಷೇತ್ರದಿಂದ ಅವಿನಾಶ್, ವಿ.ಎಸ್ ಆನಂದ್, ಚಂದ್ರು, ಕುಬೇರಪ್ಪ, ಯೋಗೇಶ್, ಮಹಿಳಾ ಕ್ಷೇತ್ರದಿಂದ ಮಂಜುಳಾ, ಗಿರಿಜಾ, ಹಿಂದುಳಿದ ವರ್ಗ ‘ಎ’ ನಿಂದ ರವಿ ಕುಮಾರ್, ಹಿಂದುಳಿದ ವರ್ಗ ‘ಬಿ’ ನಿಂದ ಮೋಹನ್ ಕುಮಾರ್, ಪರಿಶಿಷ್ಟ ಜಾತಿಯಿಂದ ಪುಟ್ಟಸ್ವಾಮಿ ಆಯ್ಕೆಯಾದರೆ, ಪರಿಶಿಷ್ಟ ಪಂಗಡದಿಂದ ಶಾಂತಪ್ಪ ನಾಯಕ ಅವಿರೋಧವಾಗಿ ಆಯ್ಕೆಯಾದರು.

ಸಾಲಗಾರರಲ್ಲದ ಕ್ಷೇತ್ರದಿಂದ ಕಿಶೋರ್ ಕುಮಾರ್ ಆಯ್ಕೆಯಾದರು. ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಕುಮಾರ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಹಾಸನ ಜಿಲ್ಲಾ ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್, ಬೆಳಮೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆರ್.ಎಸ್. ನಟರಾಜ್, ಪಾಳ್ಯ ಸೊಸೈಟಿ ನಿರ್ದೇಶಕ ಕಟ್ಟೆಗದ್ದೆ ನಾಗರಾಜ್, ಬಿಜೆಪಿ ಮುಖಂಡ ಕೆ.ಕೆ ಪ್ರಸಾದ್, ರುದ್ರೇಶ್ ಕಾಡ್ಲೂರು, ನಂದನ್, ಚಂದ್ರಶೇಖರ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವಿವೇಕ್ ವೈದ್ಯನಾಥ್ ಇತರರಿದ್ದರು.