ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಅವಧಿ ಮುಗಿದ 4 ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆ ಚುನಾವಣೆ ಅ. 14ರಂದು ಮಧ್ಯಾಹ್ನ 3ಗಂಟೆಗೆ ಹುಬ್ಬಳ್ಳಿಯ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ನಿಗದಿಪಡಿಸಲಾಗಿದೆ.
ಬೆಳಗ್ಗೆ 10ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಾಮಪತ್ರಗಳ ಸ್ವೀಕೃತಿ, ಮಧ್ಯಾಹ್ನ 3 ಗಂಟೆಗೆ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುವುದು ಎಂದು ಚುನಾವಣೆ ಅಧ್ಯಕ್ಷಾಧಿಕಾರಿಗಳಾಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಂ. ಜಾನಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.