ಹನೂರು ತಾಲೂಕು ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಗೆ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ರಾಘವೇಂದ್ರ ನಾಯ್ಡು, ಜಯಸುಂದರ್ ನಾಯ್ಡು, ವಿಜೇಂದ್ರ, ನಾಗರಾಜ ನಾಯ್ಡು, ವೃಷಭೇಂದ್ರಸ್ವಾಮಿ ಇತರರು ಇದ್ದರು. 
ಜಿಲ್ಲೆ

ಕೃಷಿಕ ಸಮಾಜಕ್ಕೆ ಪದಾಧಿಕಾರಿಗಳ ಆಯ್ಕೆ

ಹನೂರು: ತಾಲೂಕು ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಗೆ ಸೋಮವಾರ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಈ ಸಮಿತಿಯ 5 ವರ್ಷದ ಅವಧಿಗೆ ಡಿ. 9 ರಂದು ನಡೆದ ಚುನಾವಣೆಯಲ್ಲಿ 15 ರೈತರನ್ನು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಸೋಮವಾರ ನಡೆದ ಪದಾಧಿಕಾರಿಗಳ ಆಯ್ಕೆ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಾಘವೇಂದ್ರ ನಾಯ್ಡು, ಉಪಾಧ್ಯಕ್ಷರಾಗಿ ಜಯಸುಂದರ್ ನಾಯ್ಡು, ಪ್ರಧಾನ ಕಾರ್ಯದರ್ಶಿಯಾಗಿ ನಾಗರಾಜ ನಾಯ್ಡು, ಖಜಾಂಚಿಯಾಗಿ ವಿಜೇಂದ್ರ ಹಾಗೂ ಜಿಲ್ಲಾ ಪ್ರತಿನಿಧಿಯಾಗಿ ವೃಷಬೇಂದ್ರಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ಕೃಷಿ ಅಧಿಕಾರಿ ನಾಗೇಂದ್ರ ಕರ್ತವ್ಯ ನಿರ್ವಹಿಸಿದರು.

ಈ ವೇಳೆ ಪ್ರತಿನಿಧಿ ವೃಷಭೇಂದ್ರ ಸ್ವಾಮಿ ಮಾತನಾಡಿ, ಇದೇ ಮೊದಲ ಬಾರಿಗೆ ತಾಲೂಕು ಕೃಷಿಯ ಸಮಾಜ ಸಮಿತಿಯನ್ನು ರಚಿಸಲಾಗಿದ್ದು, ಕೃಷಿ, ತೋಟಗಾರಿಕೆ, ಸಣ್ಣ ನೀರಾವರಿ, ಸೆಸ್ಕ್, ಅರಣ್ಯ ಹಾಗೂ ಇನ್ನಿತರ ಇಲಾಖೆಗಳ ವ್ಯಾಪ್ತಿಗೆ ಒಳಪಟ್ಟಿದೆ. ಹಾಗಾಗಿ ಇಲಾಖೆಯಿಂದ ದೊರಕುವ ಸವಲತ್ತುಗಳನ್ನು ದೊರಕಿಸಿ ಕೊಡುವುದರ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು. ಜತೆಗೆ ಸರ್ಕಾರದ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುವುದು. ಆದ್ದರಿಂದ ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.