ಮದ್ದೂರು ತಾಲೂಕು ಕೃಷಿ ಸಮಾಜದ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಬಿ.ನಾಗರಾಜು, ಉಪಾಧ್ಯಕ್ಷ ಎಂ.ಬಿ.ತಮ್ಮಣ್ಣಗೌಡ, ಪ್ರಧಾನ ಕಾರ್ಯದರ್ಶಿ ಬಿ.ಬಸವರಾಜು, ಖಜಾಂಚಿ ಕೆ.ವಿ.ಶ್ರೀನಿವಾಸ್ ಹಾಗೂ ಜಿಲ್ಲಾ ಪ್ರತಿನಿಧಿ ಜಿ.ಡಿ.ಚಂದ್ರಶೇಖರ್ ಅವರನ್ನು ಅಭಿನಂದಿಸಲಾಯಿತು.  
ಜಿಲ್ಲೆ

ಕೃಷಿ ಸಮಾಜಕ್ಕೆ ಪದಾಧಿಕಾರಿಗಳ ಆಯ್ಕೆ

ಮದ್ದೂರು : ಮದ್ದೂರು ತಾಲೂಕು ಕೃಷಿ ಸಮಾಜದ ಅಧ್ಯಕ್ಷರಾಗಿ ಕೆ.ಬಿ.ನಾಗರಾಜು, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಬಸವರಾಜು ಅವಿರೋಧವಾಗಿ ಆಯ್ಕೆಯಾದರು.

ಪಟ್ಟಣದ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಉಪಾಧ್ಯಕ್ಷರಾಗಿ ಎಂ.ಬಿ.ತಮ್ಮಣ್ಣಗೌಡ, ಖಜಾಂಚಿಯಾಗಿ ಕೆ.ವಿ.ಶ್ರೀನಿವಾಸ್ ಹಾಗೂ ಜಿಲ್ಲಾ ಪ್ರತಿನಿಧಿಯಾಗಿ ಜಿ.ಡಿ.ಚಂದ್ರಶೇಖರ್ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರತಿಭಾ ಕಾರ್ಯ ನಿರ್ವಹಿಸಿದರು.

ನೂತನ ಅಧ್ಯಕ್ಷ ಕೆ.ಬಿ.ನಾಗರಾಜು ಅಭಿನಂದನೆ ಸ್ವೀಕರಿಸಿ ಮಾತನಾಡಿ, ಸರ್ಕಾರದಿಂದ ಬರುವ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ತಾಲೂಕು ಕೃಷಿ ಸಮಾಜ ನಿರಂತರವಾಗಿ ಕೆಲಸ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಿರ್ದೇಶಕರಾದ ಟಿ.ಎಂ.ರಾಜಶೇಖರ್, ಬಿ.ಜೆ.ರಮೇಶ್, ಕೆ.ಕೃಷ್ಣಪ್ಪ, ಎಂ.ಶಿವಣ್ಣ, ಸಿ.ಎಸ್.ಲೋಕೇಶ್, ಎಸ್.ಪಿ.ಶಂಕರಯ್ಯ, ಎಸ್.ವೆಂಕಟಚಲುವಯ್ಯ, ಡಿ.ಎನ್.ರಘು, ಎಂ.ವಿ.ಪ್ರಕಾಶ್, ಪುಟ್ಟರಾಮು, ಕೃಷಿ ಅಧಿಕಾರಿಗಳಾದ ದಯಾನಂದಕುಮಾರ್, ಅಧೀಕ್ಷಕ ಶಿವನಂಜೇಗೌಡ ಹಾಗೂ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.