ಗುಂಡ್ಲುಪೇಟೆ: ತಾಲೂಕಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಹಾಗೂ ಪಂಗಡದ ನೌಕರರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಗುರುವಾರ ನಡೆಯಿತು.
ಪಟ್ಟಣದ ಆಡಳಿತ ಸೌಧದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ತಾಲೂಕು ಅಧ್ಯಕ್ಷರಾಗಿ ಬರಗಿ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಸಿದ್ದರಾಜು, ಉಪಾಧ್ಯಕ್ಷರಾಗಿ ಅಗತಗೌಡನಹಳ್ಳಿ ಗ್ರಾಮ ಪಂಚಾಯಿತಿ ಕಂಪ್ಯೂಟರ್ ಆಪರೇಟರ್ ಸಾಕಮ್ಮ, ಪ್ರಧಾನ ಕಾರ್ಯದರ್ಶಿಯಾಗಿ ಸೋಮಹಳ್ಳಿ ಗ್ರಾಮ ಪಂಚಾಯಿತಿ ಎಸ್‌ಡಿಒ ಪ್ರಸಾದ್ ಮೂರ್ತಿ, ಖಜಾಂಚಿಯಾಗಿ ಪಡಗೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೀಲಾ, ಸಂಘಟನಾ ಕಾರ್ಯದರ್ಶಿಯಾಗಿ ತೆರಕಣಾಂಬಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಮಂಜು, ಸಹ ಕಾರ್ಯದರ್ಶಿಯಾಗಿ ಹೊರೆಯಾಲ ಗ್ರಾಮ ಪಂಚಾತಿಯಿ ಕಾರ್ಯದರ್ಶಿ ಸೋಮಶೇಖರ್ ಆಯ್ಕೆಯಾದರು.
ಸಂಘದ ಜಿಲ್ಲಾಧ್ಯಕ್ಷ ಎಂ.ಶಾಂತರಾಜು, ಜಿಲ್ಲಾ ಉಪಾಧ್ಯಕ್ಷ ಮಹದೇವಸ್ವಾಮಿ ಇತರರಿದ್ದರು.