ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿಶ್ವ ವಿದ್ಯಾಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ೨೦೨೪-೨೫ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಇತ್ತಿಚಿಗೆ ನಡೆಯಿತು.
ಒಕ್ಕೂಟದ ಅಧ್ಯಕ್ಷರಾಗಿ ಶಿವಕುಮಾರ ನೀಲಗುಂದ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಅನಂತ ಪೂಜಾರಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ಪ ಚವ್ಹಾಣ, ಮಹಿಳಾ ಪ್ರತಿನಿಽಯಾಗಿ ಶೋಭಾ ಎನ್, ಖಜಾಂಚಿಯಾಗಿ ಪರಶುರಾಮ, ಸಂಘಟನಾ ಕಾರ್ಯದರ್ಶಿಯಾಗಿ ಬಸವರಾಜ, ನಿಂಗಪ್ಪ, ಕಿರಣ ಚವ್ಹಾಣ, ಶರೀಫ್ ಮುಂದಿನಮನಿ ಆಯ್ಕೆಯಾಗಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಗೌರವ ಅಧ್ಯಕ್ಷ ಡಾ. ಜಗದೀಶ ಅಸೋದೆ, ಮಾಜಿ ಅಧ್ಯಕ್ಷ ವಿರೂಪಾಕ್ಷ ಚಳ್ಳೂರು, ಮಾಜಿ ಉಪಾಧ್ಯಕ್ಷ ಧನಂಜಯಕುಮಾರ ಸುಳೇಕಲ್, ಸಂಶೋಧನಾ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.