ಜಿಲ್ಲೆ

ಚುನಾವಣಾ ಕರ್ತವ್ಯ ನಿರ್ಲಕ್ಷ್ಯ; ಅಧಿಕಾರಿ ಅಮಾನತು

ಗೋಪಾಲಕೃಷ್ಣ ಪಾದೂರ್

ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧಿಸಿ ಉಡುಪಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಟಪಾಡಿ, ಹಂದಾಡಿ, ಕುಮ್ರಗೋಡು ಮತ್ತು ವಾರಂಬಳ್ಳಿ ಮತಗಟ್ಟೆಗಳಿಗೆ ಸೆಕ್ಟರ್ ಅಧಿಕಾರಿಯಾಗಿ ನೇಮಕಗೊಂಡಿದ್ದ ಕೈಮಗ್ಗ ಮತ್ತು ಜವಳಿ ಇಲಾಖೆ ಪ್ರವಧರ್ನಾಧಿಕಾರಿ ಕೆ.ಪಿ. ದಯಾನಂದ ಜವಳಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗದೆ ನಿರ್ಲಕ್ಷ್ಯ ವಹಿಸಿದ್ದರಿಂದ ಅಮಾನತುಗೊಳಿಸಲಾಗಿದೆ.

ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾಗಿರುವ ಬಗ್ಗೆ ಕಾರಣ ಕೇಳಿ ನೋಟೀಸ್ ನೀಡಿದ್ದರೂ ಸಹ ಯಾವುದೇ ವಿವರಣೆ ನೀಡದೇ ಸೆಕ್ಟರ್ ಅಧಿಕಾರಿ ಕರ್ತವ್ಯಕ್ಕೆ ಹಾಜರಾಗದೇ ಬೇಜಾವಬ್ದಾರಿತನದಿಂದ ವರ್ತಿಸಿರುವ ಹಿನ್ನಲೆಯಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಅಭಿವೃದ್ದಿ ಆಯುಕ್ತ ಹಾಗೂ ಶಿಸ್ತು ಪ್ರಾಧಿಕಾರ ಅಧಿಕಾರಿ ಟಿ.ಎಚ್.ಎಂ ಕುಮಾರ್ ಅವರು ದಯಾನಂದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.