ಸಿದ್ದಾಪುರ ತಾಲೂಕಿನಲ್ಲಿ ಸೋಮವಾರ ಸಂಜೆ ಬೀಸಿದ ಗಾಳಿ ಹಾಗೂ ಸುರಿದ ಮಳೆಗೆ ವಿದ್ಯುತ್ ತಂತಿಯ ಮೇಲೆ ಮರ ಬಿದ್ದಿರುವುದು. 
ಜಿಲ್ಲೆ

ಗಾಳಿ-ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ

ವಿನಯ ಹೆಗಡೆ

ಸಿದ್ದಾಪುರ: ತಾಲೂಕಿನಾದ್ಯಂತ ಸೋಮವಾರ ಸಂಜೆ ಬೀಸಿದ ಗಾಳಿ ಹಾಗೂ ಸುರಿದ ಮಳೆಗೆ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.

ಸೋಮವಾರ ಸಂಜೆ ಒಂದು ತಾಸು ಸುರಿದ ಮಳೆಯಿಂದ ಹಲವೆಡೆ ಗಟಾರಗಳು ತುಂಬಿ ಕೊಳಚೆ ನೀರು ರಸ್ತೆಯ ಮೇಲೆ ಹರಿದಿದ್ದಲ್ಲದೆ, ರಸ್ತೆಯ ಮೇಲೆ ಕಸಕಡ್ಡಿಗಳು ನಿಂತಿವೆ.

ಗಾಳಿಯ ರಭಸಕ್ಕೆ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದಲ್ಲದೇ ಕೆಲವೆಡೆ ವಿದ್ಯುತ್ ತಂತಿಗಳು ತುಂಡಾಗಿ ಬಿದ್ದಿವೆ. ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಂಗಳವಾರ ವಿದ್ಯುತ್ ಮರುಸಂಪರ್ಕ ನೀಡಲು ಮುಂದಾಗಿದ್ದಾರೆ.

ಗ್ರಾಹಕರಿಗೆ ವಿದ್ಯುತ್ ಕಿರಿಕಿರಿ

ವಿದ್ಯುತ್ ಸಂಪರ್ಕ ನೀಡಿದ್ದರೂ ಆಗಾಗ ಬಂದು ಹೋಗುವ ವಿದ್ಯುತ್ ಗ್ರಾಹಕರಿಗೆ ಕಿರಿಕಿರಿ ಉಂಟು ಮಾಡುತ್ತಿರುವುದರಿಂದ ವ್ಯವಸ್ಥೆ ಸರಿಪಡಿಸಬೇಕು ಎಂದು ಗ್ರಾಹಕರು ಹೆಸ್ಕಾಂ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.