ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಕಬ್ಬಿಣದ ರೈಲಿಂಗ್ಸ್ ಅಳವಡಿಸುವಾಗ ವಿದ್ಯುತ್ ಕಂಬಕ್ಕೆ ತಗುಲಿ ಕೂಲಿ ಕಾರ್ಮಿಕ ಮೃತಪಟ್ಟಿದ್ದು, ಮತ್ತೊಬ್ಬ ಗಾಯಗೊಂಡಿದ್ದಾನೆ. ಬಿಹಾರ ಮೂಲದ ವಿಷ್ಣುಕುಮಾರ್(24) ಮೃತ ವ್ಯಕ್ತಿ. ರಾಜನ್(22) ಎಂಬಾತ ಗಾಯಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮಾಗಡಿ ರಸ್ತೆ ವಾಲ್ಮೀಕಿನಗರದಲ್ಲಿ ಸೋಮವಾರ ಬೆಳಗ್ಗೆ 9.30ರಲ್ಲಿ ಘಟನೆ ನಡೆದಿದೆ ಎಂದು ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಎಲೆಕ್ಟ್ರಿಕಲ್ ಗುತ್ತಿಗೆದಾರ ಶ್ರೀವರ್ಧನ್ ಎಂಬುವರು 4 ಅಂತಸ್ತಿನ ಕಟ್ಟಡ ನಿರ್ಮಿಸುತ್ತಿದ್ದಾರೆ. ಸೋಮವಾರ ಬೆಳಗ್ಗೆ ಕಬ್ಬಿಣದ ಕೆಲಸ ಮಾಡುವ ವಿಷ್ಣುಕುಮಾರ್, ಕಬ್ಬಿಣದ ರೈಲಿಂಗ್ಸ್ ಅಳವಡಿಸುತ್ತಿದ್ದ. ಕಟ್ಟಡದ ಸಮೀಪದಲ್ಲಿಯೇ ಬೆಸ್ಕಾಂ ತಂತಿ ಹಾದು ಹೋಗಿದ್ದವು.
ಇತ್ತ ವಿಷ್ಣುಕುಮಾರ್, ಕೆಲಸದಲ್ಲಿ ನಿರತನಾಗಿದ್ದಾಗ ಆಕತ್ಮಿಕವಾಗಿ ಕಬ್ಬಿಣ ವಿದ್ಯುತ್ ತಂತಿ ಮೇಲೆ ಬಿದ್ದು, ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಕೂಲಿ ಕಾರ್ಮಿಕ ಮೃತಪಟ್ಟಿದ್ದಾನೆ. ಮತ್ತೊಬ್ಬ ರಾಜನ್‌ಗೆ ಸುಟ್ಟ ಗಾಯಗಳಾಗಿವೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಆ್ ಮಾಡಿ ಶವವನ್ನು ತೆರವು ಮಾಡಿದ್ದಾರೆ.
ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಕಟ್ಟಡದ ಮಾಲೀಕ ಶ್ರೀವರ್ಧನ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.