ಜಿಲ್ಲೆ

ತ್ರೈಮಾಸಿಕ ಕಾರ್ಯನಿರ್ವಹಣೆ: ಏ.24ರಂದು ವಿದ್ಯುತ್ ವ್ಯತ್ಯಯ

ಕೆ.ಎನ್.ರಾಘವೇಂದ್ರ

ಮಂಡ್ಯ: ತೂಬಿನಕೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಏ.24ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ತೂಬಿನಕೆರೆ, ತೂಬಿನಕೆರೆ ಕೈಗಾರಿಕಾ ಬಡಾವಣೆ, ಉರಮಾರಕಸಲಗೆರೆ, ಯಲಿಯೂರು, ಕಾಳೇನಹಳ್ಳಿ, ಎಲೆಚಾಕನಹಳ್ಳಿ, ರಾಗಿಮುದ್ದನಹಳ್ಳಿ, ಸುಂಡಹಳಿ, ಪೀಹಳ್ಳಿ, ಕೊಡಿಯಾಲ, ಆಲಗೂಡು ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.