ಜಿಲ್ಲೆ

ಕಾಡಾನೆ ದಾಳಿಗೆ ಮೃತಪಟ್ಟವರ ಮನೆಗೆ ಶಾಸಕ ಪೊನ್ನಣ್ಣ ಭೇಟಿ

ಎ. ಆರ್. ರಘುರಾಮ

ಸಿದ್ದಾಪುರ : ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ ಸುಳ್ಯಕೋಡಿ ಚಿನ್ನಪ್ಪ ಅವರ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಸೋಮವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತರ ಕುಟುಂಬದವರಿಗೆ ಸರ್ಕಾರದ 15 ಲಕ್ಷ ರೂ. ಮೊತ್ತದ ಪರಿಹಾರದ ಚೆಕ್ ಅನ್ನು ಶಾಸಕರು ವಿತರಿಸಿದರು. ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ ಪೂವಯ್ಯ, ಸಿದ್ದಾಪುರ ವಲಯ ಅಧ್ಯಕ್ಷ ಪ್ರತೀಶ್ ಹಾಗೂ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.