ಮಡಿಕೇರಿ: ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಮತೃಪಟ್ಟಿರುವ ಘಟನೆ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಚೆಟ್ಟಳ್ಳಿ ಯಲ್ಲಿ ನಡೆದಿದೆ. ಕುಡ್ಲೂರು ಚೆಟ್ಟಳ್ಳಿ ಮಲಕೋಡು ನಿವಾಸಿ ಸಿ.ಎಂ. ಮೊಹಮ್ಮದ್ (೭೫) ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.
ಬುಧವಾರ ಮುಂಜಾನೆ ೭.೩೦ ಗಂಟೆಗೆ ಮನೆಯಿಂದ ತೋಟ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಂಡಕೆರೆ ಬಳಿ ಕಾಡಾನೆ ದಾಳಿ ನಡೆಸಿತು. ಕಾಡಾನೆ ಯಿಂದ ತುಳಿತಕ್ಕೊಳಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಂತೆ ದಾರಿ ಮಧ್ಯ ಸಾವನ್ನಪ್ಪಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.