ಜಿಲ್ಲೆ

ಆನೆ ದಾಳಿ ವ್ಯಕ್ತಿಗೆ ಗಾಯ

ಗಂಗಾಧರ ಬಿ ವಿ

ರಾಮನಗರ : ತಾಲೂಕಿನ ಕೋಟಳ್ಳಿ ಬಳಿ ಅರ್ಕಾವತಿ ನದಿ ಸಮೀಪ ಆನೆ ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಗಾಯಗೊಳಿಸಿರುವ ಘಟನೆ ನಡೆದಿದೆ.

ಕೈಲಾಂಚ ಹೋಬಳಿ ಹುಣಸನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇರುಳಿಗರದೊಡ್ಡಿ ಗ್ರಾಮದ ದೇವರಾಜು 26 ಗಾಯಗೊಂಡ ವ್ಯಕ್ತಿ.

ಇಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿ ಮುಖದ ಭಾಗಕ್ಕೆ ತೀವ್ರವಾಗಿ ಗಾಯವಾಗಿದ್ದು ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಶಾಸಕ ಇಕ್ಬಾಲ್ ಹುಸೇನ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯ ಆರೋಗ್ಯ ವಿಚಾರಿಸಿದರು. ಪ್ರಾಣಾಪಾಯದಿಂದ ವ್ಯಕ್ತಿ ಪಾರಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ