ರಾಯಚೂರು ತಾಲೂಕಿನ ಹೀರಾಪುರ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂಬಿಗರ ಚೌಡಯ್ಯ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು, ಜಿಲ್ಲಾ ಗಂಗಾಮಸ್ಥ ಸಮಾಜದ ಸಂಘ ಅಧ್ಯಕ್ಷ ಕೆ.ಶಾಂತಪ್ಪ, ಮುಖಂಡರಾದ ರುದ್ರಪ್ಪ ಅಂಗಡಿ, ಜಿ.ಶಿವಮೂರ್ತಿ, ಹನುಮಂತಪ್ಪ, ವಿಶ್ವನಾಥ ಚಿಂಚರಕಿ ಇದ್ದರು. 
ಜಿಲ್ಲೆ

ಚೌಡಯ್ಯರ ಸಂದೇಶಗಳನ್ನು ಮೈಗೂಡಿಸಿಕೊಳ್ಳಿ

ರಾಚಯ್ಯ ಸ್ವಾಮಿ

ರಾಯಚೂರು: ಬಸವಾದಿ ಶರಣರ ಅನುಯಾಯಿಗಳಲ್ಲಿ ಒಬ್ಬರಾಗಿರುವ ಅಂಬಿಗರ ಚೌಡಯ್ಯರು ಪ್ರಮುಖರಾಗಿದ್ದು, ನೇರ, ನಿಷ್ಠುರ ಮತ್ತುತರ್ಕ ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದರು ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ತಿಳಿಸಿದರು.
ತಾಲೂಕಿನ ಹೀರಾಪುರ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ನಿಜ ಶರಣ ಅಂಬಿಗರ ಚೌಡಯ್ಯರ ಪಂಚಲೋಹ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ನಿಜಶರಣ ಅಂಬಿಗರ ಚೌಡಯ್ಯ ತತ್ತ್ವಾದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದರು.
ಸಮಾಜದಲ್ಲಿ ಸಮಾನತೆಯ ಸಂದೇಶದ ಮೂಲಕ ಶರಣರು ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಮಾಡಿದ್ದರು. ಗ್ರಾಮದಲ್ಲಿ ಎಲ್ಲ ಸಮಾಜದವರು ಸೇರಿ ಅಂಬಿಗರ ಚೌಡಯ್ಯರ ಮೂರ್ತಿ ಪ್ರತಿಷ್ಠಾನ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗಂಗಾಮಸ್ಥ ಸಮಾಜದ ಸಂಘ ಅಧ್ಯಕ್ಷ ಕೆ.ಶಾಂತಪ್ಪ, ಮುಖಂಡರಾದ ರುದ್ರಪ್ಪ ಅಂಗಡಿ, ಜಿ.ಶಿವಮೂರ್ತಿ, ಹನುಮಂತಪ್ಪ, ವಿಶ್ವನಾಥ ಚಿಂಚರಕಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.