ಗಂಗಾವತಿ: ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಹಳ್ಳಿಗಳಿಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದೊಯ್ದು ಜನರ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.
ಇದನ್ನೂ ಓದಿ:http://ಜನರ ಸಮಸ್ಯೆಗಳ ನಿವಾರಣೆಗೆ ಒತ್ತು
ತಾಲೂಕಿನ ಶ್ರೀರಾಮನಗರದ ದೈವರ್ಡ್ ಪ್ರೇಯರ್ ಟವರ್‌ನಲ್ಲಿ ಕ್ರಿಶ್ಚಿಯನ್ ಅಸೋಸಿಯೇಶನ್ ವೆಲ್‌ೇರ್ ಸೊಸೈಟಿ ಮತ್ತು ಜಿಲ್ಲಾ ಕ್ರಿಶ್ಚಿಯನ್ ಅಸೋಸಿಯೇಶನ್‌ನಿಂದ ಸೋಮವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ಎಲ್ಲ ಸಮುದಾಯದ ಮತದಾರರ ಬೆಂಬಲದಿಂದ ಅತಿ ಹೆಚ್ಚು ಅಂತರದಿಂದ ಆಯ್ಕೆಯಾಗಿದ್ದು, ಜನರ ನಿರೀಕ್ಷೆಗೆ ತಕ್ಕಂತೆ ಕರ್ತವ್ಯ ನಿರ್ವಹಿಸುವೆ. ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಯತ್ನಿಸುತ್ತೇನೆ.
ಎಲ್ಲ ಸಮುದಾಯವನ್ನು ಒಗ್ಗೂಡಿಸಿಕೊಂಡು ಹೋಗುತ್ತೇನೆ ಎಂದರು. ಕ್ರಿಶ್ಚಿಯನ್ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಶಾಲಾ ಮಕ್ಕಳಿಗೆ ನೋಟ್‌ಬುಕ್‌ಗಳನ್ನು ವಿತರಿಸಲಾಯಿತು.