ಅಜ್ಜಂಪುರದಲ್ಲಿ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆಯನ್ನು ಎ.ಎನ್.ಮಹೇಶ್ ಹಾಗೂ ಜಿ.ಎಚ್.ಶ್ರೀನಿವಾಸ್ ಉದ್ಘಾಟಿಸಿದರು. ಟಿ.ಎನ್.ಮೊದಲಿಯಾರ್, ಎಸ್.ಸುರೇಶ್‌ಚಂದ್ರ, ಎಚ್.ಶಿವಣ್ಣ ಇತರರಿದ್ದರು. 
ಜಿಲ್ಲೆ

ಸುದ್ದಿಯ ನಿಖರತೆಗೆ ಹೆಚ್ಚಿನ ಒತ್ತು ನೀಡಿ

ಜಿ.ಹೆಚ್. ಧನ್ಯಕುಮಾರ್

ತರೀಕೆರೆ: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ಪತ್ರಿಕೆಗಳು ಹಾಗೂ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ಪರಿಸರ ತಜ್ಞರ ಮೌಲ್ಯ ಮಾಪನ ಸಮಿತಿ ಅಧ್ಯಕ್ಷ ಎ.ಎನ್.ಮಹೇಶ್ ಹೇಳಿದರು.
ಅಜ್ಜಂಪುರ ಪಟ್ಟಣದ ತಾಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಮತ್ತು ಜನಪ್ರತಿನಿಧಿಗಳಿಗೆ ಎಚ್ಚರಿಸುವ ಕೆಲಸ ಮಾಡುತ್ತಲೇ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಪತ್ರಕರ್ತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ಅವರ ಜೀವನಕ್ಕೆ ಭದ್ರತೆ ಒದಗಿಸಬೇಕು ಎಂದರು.
ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, ಪತ್ರಕರ್ತರು ಸುದ್ದಿಯ ನಿಖರತೆಗೆ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ಸೌಲಭ್ಯ ಕಲ್ಪಿಸಿದ್ದು, ಒಗ್ಗಟ್ಟಾಗಿದ್ದರೆ ನಿವೇಶನ ಹಂಚಿಕೆ ಸೇರಿ ವಿವಿಧ ಸವಲತ್ತುಗಳನ್ನು ಕೊಡಿಸಿಕೊಡಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಟಿ.ಎನ್.ಮೊದಲಿಯಾರ್ ಮಾತನಾಡಿ, ದೃಶ್ಯ ಮಾದ್ಯಮಗಳ ಭರಾಟೆ ನಡವೆಯೂ ಪತ್ರಿಕೆಗಳು ವಸ್ತುನಿಷ್ಠ ವರದಿ ಪ್ರಕಟಿಸಿ ಓದುಗರ ವಿಶ್ವಾಸಗಳಿಸಿವೆ. ಸಮಾಜದ ಅಂಕುಡೊಂಕು ತಿದ್ದುವ ಪತ್ರಕರ್ತರು ಹೆಚ್ಚು ಅಧ್ಯಯನ ಶೀಲರಾಗಬೇಕು ಎಂದರು.
2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಎಸ್.ಸುರೇಶ್‌ಚಂದ್ರ, ತಾಲೂಕು ಅಧ್ಯಕ್ಷ ಎಚ್.ಶಿವಣ್ಣ, ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ತಿಪ್ಪೇಶ್, ಗ್ಯಾರಂಟಿ ಯೋಜನೆ ಸಲಹಾ ಸಮಿತಿ ಅಧ್ಯಕ್ಷ ಎಂ.ಜೆ.ಕುಮಾರ್, ತಾ.ಪಂ ಮಾಜಿ ಸದಸ್ಯ ಕೃಷ್ಣಪ್ಪ ಮತ್ತಿತರರಿದ್ದರು.