ಜಿಲ್ಲೆ

ಕನ್ನಡ ಭಾಷೆಗೆ ಒತ್ತು ನೀಡಿ

ಎಂ.ರವಿ

ಕುಶಾಲನಗರ: ಅನ್ಯಭಾಷೆಗಳ ಬಳಕೆ ಅತ್ಯವಶ್ಯಕವಾಗಿದ್ದರೂ ಕೂಡ ಕನ್ನಡಕ್ಕೆ ಪ್ರಾಧಾನ್ಯತೆ ನೀಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕಿ ಫ್ಯಾನ್ಸಿ ಮುತ್ತಣ್ಣ ಹೇಳಿದರು.

ಹೆಬ್ಬಾಲೆ ಪ್ರೌಢಶಾಲೆ ಆವರಣದಲ್ಲಿ ವಿದ್ಯಾವರ್ಧಕ ಸಂಘದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಭಾಷೆಗೆ ಒತ್ತು ಇದೆ. ಕನ್ನಡದ ಉಳಿವಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಹೆಬ್ಬಾಲೆ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಚ್.ಎಲ್. ರಮೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆ ಮುಖ್ಯ ಶಿಕ್ಷಕ ಬಸವರಾಜ ಶೆಟ್ಟಿ, ಹೆಬ್ಬಾಲೆ ವಿದ್ಯಾವರ್ಧಕ ಸಂಘದ ನಿರ್ದೇಶಕ ಎಚ್.ಎಚ್. ಸುಂದರ ಮಾತನಾಡಿದರು. ಹೆಬ್ಬಾಲೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಜಯಕುಮಾರ್, ಕನ್ನಡ ಪ್ರಾಧ್ಯಾಪಕ ಮೆ.ನಾ. ವೆಂಕಟನಾಯಕ್, ಎ.ಆರ್. ಯೋಗೇಶ್, ಸಿ.ಡಿ. ಲೋಕೇಶ್ ಇತರರು ಇದ್ದರು.