ಜಿಲ್ಲೆ

ಆಧುನಿಕ ಕೃಷಿಗೆ ಒತ್ತು ನೀಡಿ

ತುಮಕೂರು ಡೆಸ್ಕ್

ತುರುವೇಕೆರೆ : ಕೃಷಿ ಇಲಾಖೆಯಿಂದ ಸಿಗುವ ಸವಲತ್ತುಗಳನ್ನು ರೈತರು ಪಡೆದುಕೊಂಡು ಆಧುನಿಕ ಕೃಷಿಗೆ ಹೆಚ್ಚು ಒತ್ತು ನೀಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಕೃಷಿ ಇಲಾಖೆಯಿಂದ ಸೋಮವಾರ ಹಮ್ಮಿಕೊಂಡಿದ್ದ ಮುಂಗಾರು ಹಂಗಾಮಿನ ಬೀಜ ವಿತರಣೆ, ಜೀಜೋಪಚಾರ ಆಂದೋಲನ ಹಾಗೂ ಕೃಷಿ ಪರಿಕರ ವಿತರಣಾ ಕಾರ್ಯಕ್ರಮದಲ್ಲಿ ರೈತರಿಗೆ ಕೃಷಿ ಪರಿಕರಗಳನ್ನು ವಿತರಿಸಿ ಮಾತನಾಡಿದರು.

ರೈತರು ಆಧುನಿಕ ಕೃಷಿಗೆ ಬೇಕಾದ ಸಲಕರಣೆಗಳನ್ನು ಕೃಷಿ ಇಲಾಖೆ ಸಹಾಯಧನದಲ್ಲಿ ತೆಗೆದುಕೊಂಡು ವ್ಯವಸಾಯಕ್ಕೆ ಬಳಸಿಕೊಳ್ಳಬೇಕು. ಕೇವಲ ಒಂದೇ ಬೆಳೆಯನ್ನು ನಂಬಿ ವ್ಯವಸಾಯ ಮಾಡುವ ಬದಲು ರೈತರ ಆರ್ಥಿಕ ಸ್ಥಿತಿ ಸುಧಾರಿಸಲು ಲಾಭ ಬರುವಂತಹ ಬೆಳೆಗಳನ್ನು ರೈತರು ಬೆಳೆಯಬೇಕು ಎಂದು ಸಲಹೆ ನೀಡಿದರು.

ಲಾನುಭವಿಗಳಿಗೆ ಟಾರ್ಪಲ್​, ನೇಗಿಲು ಸೇರಿದಂತೆ ಕೃಷಿಗೆ ಸಂಬಂಧಿಸಿದಂತೆ ಕೃಷಿ ಪರಿಕರಗಳನ್ನು ನೀಡಲಾಯಿತು. ಸಮಗ್ರ ಅಭಿವೃದ್ಧಿ ಹೊಂದಿದ ಪ್ರಗತಿಪರ ರೈತರನ್ನು ಗುರುತಿಸಿ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.