ಯಳಂದೂರು ತಾಲೂಕು ಗ್ರಾಮ ಪಂಚಾಯಿತಿ ಪರಿಶಿಷ್ಟ ಜಾತಿ ವರ್ಗಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 
ಜಿಲ್ಲೆ

ಗ್ರಾಪಂ ಪರಿಶಿಷ್ಟ ಜಾತಿ, ವರ್ಗಗಳ ಪದಾಧಿಕಾರಿಗಳ ಆಯ್ಕೆ

ನಾಗೇಶ ಎಸ್

ಯಳಂದೂರು: ಯಳಂದೂರು ತಾಲೂಕು ಗ್ರಾಮ ಪಂಚಾಯಿತಿಯ ಪರಿಶಿಷ್ಟ ಜಾತಿ, ವರ್ಗಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ಕೆಸ್ತೂರು ಗ್ರಾಮ ಪಂಚಾಯಿತಿ ಪಿಡಿಒ ಮಹದೇವಸ್ವಾಮಿ, ಗೌರವಾಧ್ಯಕ್ಷರಾಗಿ ಕೆ.ಎಸ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿಯಾಗಿ ನಾಗೇಂದ್ರ, ಖಜಾಂಚಿಯಾಗಿ ಶ್ರೀಕಾಂತ್, ಸಂಘಟನಾ ಕಾರ್ಯದರ್ಶಿ ಪ್ರಸನ್ನ, ಲೆಕ್ಕಪರಿಶೋಧಕರಾಗಿ ಸಚಿನ್ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಶಾಂತರಾಜು, ಖಜಾಂಚಿ ವಿ.ಸಿದ್ದರಾಜು, ಪ್ರಭು ಸೇರಿದಂತೆ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ಪಿಡಿಒ, ಎಸ್‌ಡಿಎ, ಬಿಲ್ ಕಲೆಕ್ಟರ್‌ಗಳು ಹಾಗೂ ಗ್ರಾಮ ಪಂಚಾಯಿತಿ ನೌಕರರು ಹಾಜರಿದ್ದರು.