ಜಿಲ್ಲೆ

ಆ.2ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ: ಮೂರು ಪ್ರತಿಷ್ಠಿತ ಸಂಸ್ಥೆ ಭಾಗಿ

ಮಂಡ್ಯ: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆ.2ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಎಚ್‌ಡಿಎಫ್‌ಸಿ ಲೈಫ್ ಇನ್ಶುರೆನ್ಸ್, ಜೀವನ ನಿಧಿ ಲಿಮಿಟೆಡ್ ಮತ್ತು ಬಿಎಸ್‌ಎಸ್ ಮೈಕ್ರೋ ಫೈನಾನ್ಸ್ ಸಂಸ್ಥೆಯಲ್ಲಿ ಖಾಲಿಯಿರುವ ಸೇಲ್ಸ್ ಆಫೀಸರ್ಸ್, ಸೇಲ್ಸ್ ಎಕ್ಸಿಕ್ಯೂಟಿವ್ ಇನ್ ಬ್ಯಾಂಕಿಂಗ್, ಇನ್ಶುರೆನ್ಸ್ ಹಾಗೂ ಟ್ರೈನಿಂಗ್ ಕಲೆಕ್ಷನ್ ಆಫೀಸರ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್ಸಿ, ಪಿಯುಸಿ ಹಾಗೂ ಯಾವುದೇ ಪದವಿ ಉತ್ತೀರ್ಣರಾದ 18 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಸ್ವವಿವರೊಂದಿಗೆ ಅಂದು ಬೆಳಗ್ಗೆ 10.30ಕ್ಕೆ ಸಂದರ್ಶನಕ್ಕೆ ಹಾಜರಾಗಬಹುದು. ಮಾಹಿತಿಗೆ ದೂ.ಸಂ 08232-295124, ಮೊ.ಸಂ 9164642684, 8970646629 ಹಾಗೂ 8660061488 ಯನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.