ಜಿಲ್ಲೆ

ರೈತರ ಮಕ್ಕಳಿಗಾಗಿ ಜ.19ಕ್ಕೆ ಒಕ್ಕಲಿಗ ಯುವ ಬ್ರಿಗೇಡ್​ನ ಉದ್ಯೋಗ ಮೇಳ

ಬೆಂಗಳೂರು: ಒಕ್ಕಲಿಗ ಯುವ ಬ್ರಿಗೇಡ್ ನೇತೃತ್ವದಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಜಯಂತ್ಯುತ್ಸವದ ಅಂಗವಾಗಿ ಪಿರಿಯಾಪಟ್ಟಣ್ಣದ ಆದಿ ಚುಂಚನಗಿರಿ ಪದವಿ ಕಾಲೇಜಿನಲ್ಲಿ ಜ.19ರಂದು ಉದ್ಯೋಗ ಮೇಳ ಆಯೋಜಿಸಿದೆ.

ಉದ್ಯೋಗಾಂಕ್ಷಿಗಳಿಗೆ ಈ ಮೇಳವು ಸಂಪೂರ್ಣ ಉಚಿತವಾಗಿದ್ದು, ಪ್ರತಿ ಅಭ್ಯರ್ಥಿಯು 5 ಕಂಪನಿಗಳಿಗೆ ಸಂದರ್ಶನ ನೀಡಬಹುದಾಗಿದೆ. ಎಸ್‌ಎಸ್‌ಎಲ್ಸಿ, ಪಿಯುಸಿ, ವಿವಿಧ ಕೋರ್ಸ್‌ಗಳ ಪದವಿ, ಐಟಿಐ , ಡಿಪ್ಲೊನಾ, ಇಂಜಿನಿಯರಿಂಗ್, ಸ್ನಾತಕೋತರ ಪದವಿಧರರು ಈ ಮೇಳದಲ್ಲಿ ಭಾಗವಹಿಸುವ ಮೂಲಕ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ .

50 ಕಂಪನಿಗಳು ಮತ್ತು 2000 ಉದ್ಯೋಗ ಅವಕಾಶಗಳು: ಈ ಮೇಳದಲ್ಲಿ ಸುಮಾರು 50 ಕಂಪನಿಗಳು ಭಾಗವಹಿಸಲಿದ್ದು, 2 ಸಾವಿರಕಿಂತ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿದ್ದು,

ಅಂಗವಿಕಲರಿಗೂ ಉದ್ಯೋಗ ಅವಕಾಶಗಳಿವೆ. ಹೆಚ್ಚಿನ ಮಾಹಿತಿಗಾಗಿ ದೂ: 9686564192 ಸಂಪರ್ಕಿಸಬಹುದು.