ಜಿಲ್ಲೆ

ಸ್ಥಳೀಯರಿಗೆ ಉದ್ಯೋಗ ನೀಡಲು ಕರವೇ ಮನವಿ

Uttara Kannada - Subash Hegde

ಕಾರವಾರ:ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಿಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರು ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸಿದರು.
ಕಲೆ, ಸಂಸ್ಕೃತಿಗೆ ಹೆಸರಾದ ರಾಜ್ಯಕ್ಕೆ ಹೊರ ರಾಜ್ಯದಿಂದ ಉದ್ಯೋಗ ಹುಡುಕಿಕೊಂಡು ದೊಡ್ಡ ಪ್ರಮಾಣದಲ್ಲಿ ಜನರು ವಲಸೆ ಬರುತ್ತಿದ್ದಾರೆ. ಸ್ಥಳೀಯರಿಗೆ ಉದ್ಯೋಗ ಸಿಗದೇ ಅನ್ಯಾಯವಾಗುತ್ತಿದೆ. ಈ ನಿಟ್ಟಿನಲ್ಲಿ 1986 ರಲ್ಲೇ ಸರೋಜಿನಿ ಮಹಿಷಿ ವರದಿಯೊಂದು ಸರ್ಕಾರಕ್ಕೆ ಸಲ್ಲಿಕೆಯಾಗಿತ್ತು.
ಅದರ ಪ್ರಕಾರ ಖಾಸಗಿ ಸಂಸ್ಥೆಗಳ ಸಿ ಮತ್ತು ಡಿ ದರ್ಜೆಯ ಹುದ್ದೆಗಳು ಕನ್ನಡಿಗರಿಗೆ ಮೀಸಲಾಗಿರಬೇಕು. ಬಿ ದಲ್ಲಿ ಶೇ.80 ಹಾಗೂ ಎ ದರ್ಜೆಯ ಶೇ.65 ಹುದ್ದೆಗಳನ್ನು ಸ್ಥಳೀಯರಿಗೆ ನೀಡಬೇಕಿದೆ. ಆದರೆ, ಈ ಕಾಯ್ದೆ ಸಮರ್ಪಕವಾಗಿ ಜಾರಿಯಾಗಿಲ್ಲ. ಈಗಲಾದರೂ ಕಾಯ್ದೆ ಜಾರಿಗೆ ಸರ್ಕಾರ ಮುಂದಾಗಬೇಕು. ಸ್ಥಳೀಯರಿಗೆ ಉದ್ಯೋಗ ನೀಡದ ಕಂಪನಿಗಳ ಪರವಾನಗಿ ರದ್ದು ಮಾಡಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.
ಸಂಘಟನೆಯ ತಾಲೂಕು ಅಧ್ಯಕ್ಷ ನರೇಂದ್ರ ತಳೇಕರ್, ತಾಲೂಕು ನಗರ ಘಟಕದ ಅಧ್ಯಕ್ಷ ರಾಜಾ ನಾಯ್ಕ, ಗ್ರಾಮೀಣ ಘಟಕದ ಅಧ್ಯಕ್ಷ ಪ್ರಶಾಂತ ತಾಂಡೇಲ, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಮಂಜುನಾಥ ನಾಯಕ ಇದ್ದರು.