ಬಳ್ಳಾರಿ ನಗರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಘನ ಮತ್ತು ದ್ರವ ತ್ಯಾಜ್ಯ ಘಟಕಗಳ ನಾಲ್ಕು ಚಕ್ರದ ವಾಹನ ಚಾಲನಾ ತರಬೇತಿ ಸಮಾರಂಭವನ್ನು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಉದ್ಘಾಟಿಸಿದರು. ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಎಜಿಎಂ ಮುರಳೀಕೃಷ್ಣ, ತಾಪಂ ಇಒ ಮಡಿಗಿನ ಬಸಪ್ಪ, ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಹಿರಿಯ ವ್ಯವಸ್ಥಾಪಕ ಶರಣಬಸವ ರೆಡ್ಡಿ ಇತರರಿದ್ದರು.  
ಜಿಲ್ಲೆ

ಮಹಿಳೆಯರು ಸಬಲರಾಗಲಿ

Bellari - Heera Nayak

ಬಳ್ಳಾರಿ : ಮಹಿಳೆಯರೂ ಎಲ್ಲ ಕ್ಷೇತ್ರಗಳಲ್ಲಿ ಸಮಾನರಾಗಿದ್ದು, ಸರ್ಕಾರದ ವಿವಿಧ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳುವ ಮೂಲಕ ಸಬಲರಾಗಿ ಮುನ್ನಡೆಯಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಹೇಳಿದರು.

ನಗರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಎನ್‌ಆರ್‌ಎಲ್ಎಂ ಯೋಜನೆಯಡಿ ಎಸ್‌ಎಚ್‌ಜಿ ಮಹಿಳೆಯರಿಗೆ ಮಂಗಳವಾರ ಹಮ್ಮಿಕೊಂಡಿದ್ದ ಘನ ಮತ್ತು ದ್ರವ ತ್ಯಾಜ್ಯ ಘಟಕಗಳ ನಾಲ್ಕು ಚಕ್ರದ ವಾಹನ ಚಾಲನಾ ತರಬೇತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯತ್ ಮಟ್ಟದಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಾಹನಕ್ಕೆ ವಾಹನ ಚಾಲಕಿಯರನ್ನಾಗಿ ಸ್ವ-ಸಹಾಯ ಗುಂಪಿನ ಮಹಿಳೆಯರನ್ನು ಆಯ್ಕೆ ಮಾಡಲಾಗಿದ್ದು, ಮಹಿಳೆಯರು ಧೈರ್ಯದಿಂದ ವಾಹನ ಚಲಾವಣೆ ಮಾಡುವಲ್ಲಿ ಆಸಕ್ತಿ ವಹಿಸಿ ಕಲಿಯಬೇಕು. ಉತ್ತಮ ತರಬೇತಿ ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸಬೇಕು ಎಂದು ತಿಳಿಸಿದರು.

ಜಿಪಂ ಯೋಜನಾ ನಿರ್ದೇಶಕ ಪ್ರಮೋದ್.ಪಿ., ಅವರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ. ಉತ್ತಮ ತರಬೇತಿ ಪಡೆದುಕೊಳ್ಳಬೇಕು. ಬಳ್ಳಾರಿ ಜಿಲ್ಲೆಯಲ್ಲಿ ಚಾಲನಾ ತರಬೇತಿ ಪಡೆಯದೆ ಇರುವ ಮಹಿಳೆಯರಿಗೆ ತರಬೇತಿ ಆಯೋಜಿಸಲಾಗಿದೆ ಎಂದರು.

ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಎಜಿಎಂ ಮುರಳೀಕೃಷ್ಣ, ತಾಪಂ ಇಒ ಮಡಿಗಿನ ಬಸಪ್ಪ, ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಹಿರಿಯ ವ್ಯವಸ್ಥಾಪಕ ಶರಣಬಸವ ರೆಡ್ಡಿ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರಾಜೇಸಾಬ್ ಎರಿಮನಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ರಾಜೇಂದ್ರ, ಜಿಲ್ಲಾ ವ್ಯವಸ್ಥಾಪಕ ವಿಜಯ ಕುಮಾರ, ಉಪನ್ಯಾಸಕ ಜಡೇಶ, ಸಾದಿಕ್‌ವುಲ್ಲಾ , ಸಿದ್ದಲಿಂಗಮ್ಮ, ಸಂತೋಷ ಕುಮಾರ ಇತರರು ಉಪಸ್ಥಿತರಿದ್ದರು. ತರಬೇತಿಯಲ್ಲಿ 30 ಜನ ಶಿಬಿರಾರ್ಥಿಗಳು ಭಾಗವಹಿಸಿದ್ದರು.