ಹಿರೇಕೆರೂರ: ರಾಜ್ಯದಲ್ಲಿ ಮಹಿಳಾ ಸಬಲೀಕರಣದ ಉದ್ದೇಶದೊಂದಿಗೆ ಜಾರಿಗೊಂಡ ಶಕ್ತಿ ಯೋಜನೆಯಡಿ 500 ಕೋಟಿ ಟಿಕೆಟ್ ವಿತರಿಸಲಾಗಿದ್ದು, ಇತಿಹಾಸ ನಿರ್ಮಿಸಿದೆ ಎಂದು ಶಾಸಕ ಯು.ಬಿ. ಬಣಕಾರ ಬಣ್ಣಿಸಿದರು.
ಶಕ್ತಿ ಯೋಜನೆಯಡಿ 500 ಕೋಟಿ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಸೋಮವಾರ ಬಸ್‌ಗೆ ಪೂಜೆ ಹಾಗೂ ಯೋಜನೆ ಲಾನುಭವಿಗಳಿಗೆ ಸನ್ಮಾನ ನೆರವೇರಿಸಿ ಅವರು ಮಾತನಾಡಿದರು.
ಮಹಿಳೆಯರು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ, ಆರೋಗ್ಯ ಅಭಿವೃದ್ಧಿ ಹೊಂದಲು ಶಕ್ತಿ ಯೋಜನೆ ಸಹಕಾರಿಯಾಗಿದೆ. ಇದು ಇಡೀ ದೇಶಕ್ಕೆ ಮಾದರಿಯಾಗಿದೆ. ಈ ಸಾಧನೆಯ ಹಿಂದೆ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಶಕ್ತಿ, ನಿಷ್ಠೆ ಹಾಗೂ ಬದ್ಧತೆ ಇದೆ ಎಂದರು.
ಕೆಲಸಕ್ಕೆ ಹೋಗುವ ಅನೇಕ ಮಹಿಳೆಯರಿಗೆ ಪ್ರತಿ ತಿಂಗಳು 2-3 ಸಾವಿರ ರೂ.ಗೂ ಹೆಚ್ಚು ಹಣ ಉಳಿತಾಯವಾಗುತ್ತಿದೆ ಎಂದರು.
ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಬುರಡಿಕಟ್ಟಿ, ಪಪಂ ಅಧ್ಯಕ್ಷೆ ಸುಧಾ ಚಿಂದಿ, ಗಣೇಶಗೌಡ ಪಾಟೀಲ, ಸುನೀತಾ ಕೊಡ್ಲೇರ, ಹನುಮಂತಗೌಡ ಯಡಗೌಡ್ರ, ಸಿದ್ದು ನರೇಗೌಡ್ರ, ಸನಾವುಲ್ಲಾ ಮಕಾಂದಾರ್, ಅಂಜನೇಯ ಗುತ್ತಲ, ರ್ಸ್ರಾಜ್ ಮಾಸೂರು, ನಿಸಾರ್ ರಾಮತೀರ್ಥ ಮತ್ತು ಶಕ್ತಿ ಯೋಜನೆ ಲಾನುಭವಿಗಳು ಹಾಗೂ ಕಾಂಗ್ರೆಸ್ ಮುಖಂಡರು ಇದ್ದರು.