ಕುಂದಾಪುರ ತಾಲೂಕು ಮಟ್ಟದ ಕುಸ್ತಿ ಟೂರ್ನಿಯನ್ನು ಕಿರಣ್‌ಕುಮಾರ್ ಕೊಡ್ಗಿ ಉದ್ಘಾಟಿಸಿದರು.  
ಜಿಲ್ಲೆ

ಪರಿಶ್ರಮದಿಂದ ಸಾಮರ್ಥ್ಯ ವೃದ್ಧಿ

ಇಂದಿರಾ ಎನ್ ಕೆ

ಕೋಟ: ಪರಿಶ್ರಮದಿಂದ ಸಾಮರ್ಥ್ಯ ವೃದ್ಧಿಯಾಗಲಿದೆ ಎಂದು ಶಾಸಕ ಕಿರಣ್‌ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ, ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಆಶ್ರಯದಲ್ಲಿ ಕುಂದಾಪುರ ತಾಲೂಕುಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳ ಕುಸ್ತಿ ಟೂರ್ನಿ ಉದ್ಘಾಟಿಸಿ ಮಾತನಾಡಿದರು.

ಉಪಪ್ರಾಂಶುಪಾಲ ಚಂದ್ರಶೇಖರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಸುಶೀಲಾ ಹೊಳ್ಳ, ಉದ್ಯಮಿ ವತ್ಸಲಾ ದಯಾನಂದ್ ಶೆಟ್ಟಿ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಯುವಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ ಜಿಲ್ಲಾ ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕ ಸಂಘ ಅಧ್ಯಕ್ಷ ಕಿಶನ್‌ರಾಜ್ ಶೆಟ್ಟಿ ಉಪಸ್ಥಿತರಿದ್ದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಜಿ. ಟೂರ್ನಿಯ ನಿಯಮ ಪ್ರಸ್ತಾವಿಸಿದರು. ಮಂಜುನಾಥ್ ಹೊಳ್ಳ ವಂದಿಸಿದರು. ಶಿಕ್ಷಕಿ ಅನುರಾಧಾ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಉದಯ ಮಡಿವಾಳ ಎಂ. ವಿಜೇತರ ಪಟ್ಟಿ ವಾಚಿಸಿದರು.