ಜಿಲ್ಲೆ

ಗುಡಿ ಕೈಗಾರಿಕೆಗಳಿಗೆ ಉತ್ತೇಜನ ನೀಡಿ

ಉತ್ತರ ಕನ್ನಡ ಡೆಸ್ಕ್

ಹಿರೇಕೆರೂರ: ಸಣ್ಣ ಮತ್ತು ಗುಡಿ ಕೈಗಾರಿಕೆಗಳಿಗೆ ಮಾರುಕಟ್ಟೆ ಒದಗಿಸಲು ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಗಳು ಸಹಕಾರಿಯಾಗಿವೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಪಟ್ಟಣದ ಸರ್ವಜ್ಞ ಕಲಾಭವನದಲ್ಲಿ ಜಿಪಂ ಹಾವೇರಿ ಗ್ರಾಮೀಣ ಕೈಗಾರಿಕಾ ವಿಭಾಗದಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಯಾಂತ್ರಿಕೃತ ಯುಗದಲ್ಲಿ ಗುಡಿ ಕೈಗಾರಿಕೆಗಳು ಕ್ಷೀಣಿಸುತ್ತಿದ್ದು, ಅವುಗಳನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯೂನ್ಮುಖರಾಗಬೇಕು. ಗುಡಿ ಕೈಗಾರಿಕೆಗಳನ್ನು ನಂಬಿಕೊಂಡಿರುವ ಬದುಕು ಸುಧಾರಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸುತ್ತಿದ್ದು, ಸರ್ಕಾರ ನೀಡುವ ಸಹಾಯಧನ ಬಳಸಿಕೊಂಡು ಗುಡಿ ಕೈಗಾರಿಕೆಗಳನ್ನು ಮಾಡುವ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು. ಜನತೆ ಇದರ ಪ್ರಯೋಜನ ಪಡೆದುಕೊಳ್ಳುವ ಜತೆಗೆ ಗುಡಿಕೈಗಾರಿಕೆಗಳನ್ನು ಉತ್ತೇಜಿಸಬೇಕು ಎಂದರು.

ಪಪಂ ಅಧ್ಯಕ್ಷೆ ಸುಧಾ ಚಿಂದಿ, ಉಪಾಧ್ಯಕ್ಷ ರಾಜು ಕರಡಿ, ಕೆಎಂಎಫ್ ನಿರ್ದೇಶಕ ಹನುಮಂತಗೌಡ ಭರಮಣ್ಣನವರ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಅಶೋಕ ಪ್ಯಾಟಿ, ಪಪಂ ಮುಖ್ಯಾಧಿಕಾರಿ ಕೋಡಿ ಭೀಮರಾಯ್ ಎನ್.ಟಿ., ಪಪಂ ಸಹಾಯಕ ಅಧಿಕಾರಿ ಸಿ.ಎಂ.ಪುಟ್ಟಕ್ಕಳವರ, ಆಂಜನೇಯ ಆರ್.ಎಚ್., ಇತರರಿದ್ದರು.