ಬೆಳ್ತಂಗಡಿ: ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಉಷಾ ಎನ್.ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ ಮಂಗಳವಾರ ನಡೆಯಿತು.
ಪ್ರಮುಖರಾದ ಗಿರೀಶ್ ಬಾರಿತ್ತಾಯ ಪಾರಳ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ನಿಧಿ ವಿತರಿಸಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಶಿಕ್ಷಣ ಸಂಯೋಜಕ ಎಸ್.ಎನ್.ಕಾಕತ್ಕರ್ ಮಾತನಾಡಿದರು.
ದತ್ತಿ ನಿಧಿಯಿಂದ ವಿದ್ಯಾರ್ಥಿಗಳ ಬಸ್ ಪಾಸ್ ಶುಲ್ಕ ಮತ್ತು ಶೈಕ್ಷಣಿಕ ಶುಲ್ಕ ನೀಡಲಾಯಿತು. ಬೆಳಾಲು ಗ್ರಾಪಂ ಅಧ್ಯಕ್ಷೆ ವಿದ್ಯಾಶ್ರೀ ನಿವಾಸ್ ಗೌಡ, ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಕುರ್ಕಿಲ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಶಿಧರ, ಶಿಕ್ಷಕರು ಉಪಸ್ಥಿತರಿದ್ದರು.
ಮುಖ್ಯಶಿಕ್ಷಕ ಜಯರಾಮ ಮಯ್ಯ ಸ್ವಾಗತಿಸಿದರು. ಶಿಕ್ಷಕರಾದ ಕಿರಣ್ ವಂದಿಸಿದರು. ಸುಮನ್ ಯು.ಎಸ್. ಕಾರ್ಯಕ್ರಮ ನಿರೂಪಿಸಿದರು. ಸೀತಾರಾಮ ತೋಳ್ಪಡಿತ್ತಾಯ ವಂದಿಸಿದರು.