ಮೂಡುಬಿದಿರೆ: ಹಲವು ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಇಂಜಿನಿಯರ್ ಓರ್ವರು ತಾನು ವಾಸಿಸುತ್ತಿದ್ದ ಜೈನಪೇಟೆ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬುಧವಾರ ಬೆಳಕಿಗೆ ಬಂದಿದೆ.
ಮೂಲತಃ ಚಿಕ್ಕಮಗಳೂರಿನವರಾಗಿರುವ ಇಂಜಿನಿಯರ್ ಸುಧಾಕರ ಆಚಾರ್ಯ(45) ಆತ್ಮಹತ್ಯೆ ಮಾಡಿಕೊಂಡವರು. ಬುಧವಾರ ಸಾಯಂಕಾಲ ಅಪಾರ್ಟ್‌ಮೆಂಟ್‌ನಲ್ಲಿ ವಾಸನೆ ಬರುತ್ತಿದ್ದುದನ್ನು ಗಮನಿಸಿದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ನೋಡಿದಾಗ ಸುಧಾಕರ್ ಅವರ ಶವ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಸುಧಾಕರ್ ಅವರಿಗೆ ತಾಯಿ, ಪತ್ನಿ, ಪುತ್ರ ಇದ್ದಾರೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.