ಜಿಲ್ಲೆ

ಕುಶಾಲನಗರ ಸರ್ಕಾರಿ ಎಂಜಿನಿಯರಿ0ಗ್ ಕಾಲೇಜಿನಲ್ಲಿ ಪ್ರವೇಶಾವಕಾಶ

ಸುನಿಲ್ ಪೊನ್ನೇಟಿ

ಕುಶಾಲನಗರ:

ಕರ್ನಾಟಕ ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಡಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನಲ್ಲಿ 2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಎಂಜಿನಿಯರಿAಗ್ ಕೋರ್ಸ್ ಗಳಿಗೆ ಸಿಇಟಿಯ ಕೌನ್ಸಿಲಿಂಗ್ ಮೂಲಕ ಪ್ರವೇಶವಕಾಶ ಕಲ್ಪಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪರಶಿವಮೂರ್ತಿ ತಿಳಿಸಿದ್ದಾರೆ.

ಸರ್ಕಾರಿ ಎಂಜಿನಿಯರಿAಗ್ ಕಾಲೇಜುಗಳ ಪೈಕಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕುಶಾಲನಗರ ಸರ್ಕಾರಿ ಎಂಜಿನಿಯರಿAಗ್ ಕಾಲೇಜಿನಲ್ಲಿ ಪ್ರಸ್ತುತ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ (ಇ ಅಂಡ್ ಸಿ )ವಿಭಾಗ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗ ಸೇರಿದಂತೆ ಒಟ್ಟು 4 ಕೋರ್ಸ್ ಗಳಿಗೆ ತಲಾ 60 ವಿದ್ಯಾರ್ಥಿಗಳಂತೆ ಪ್ರವೇಶವಕಾಶ ಕಲ್ಪಿಸಲಾಗಿದೆ. ಪ್ರಸ್ತುತ ಈ ಕಾಲೇಜಿನಲ್ಲಿ 805 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ ಎಂದು ಸೋಮವಾರ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿ ಸಿಇಟಿ ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳು ಪ್ರಥಮ ಆದ್ಯತೆ ಮೇರೆಗೆ ಕುಶಾಲನಗರ ಸರ್ಕಾರಿ ಸರ್ಕಾರಿ ಇಂಜಿನಿಯರಿAಗ್ ಕಾಲೇಜು ಆಯ್ಕೆ ಮಾಡಿಕೊಳ್ಳುಬಹುದು. ಇಲ್ಲಿ ಉತ್ತಮ ಮೂಲ ಸೌಲಭ್ಯ ಹಾಗೂ ತಾಂತ್ರಿಕ ಸೌಲಭ್ಯಗಳು, ಸುಸಜ್ಜಿತ ಸೆಮಿನಾರ್ ಹಾಲ್ ಗಳು, ಪ್ರಯೋಗಾಲಗಳು ಸೇರಿದಂತೆ ಕಂಪ್ಯೂಟರ್ ತರಬೇತಿ ಹಾಗೂ ಗ್ರಂಥಾಲಯ ಸೌಲಭ್ಯಗಳಿದೆ. ನುರಿತ ಹಿರಿಯ ಬೋಧಕ ವರ್ಗದವರನ್ನು ಹೊಂದಿರುವ ಈ ಕಾಲೇಜು ಕೊಡಗಿನ ಪ್ರತಿಷ್ಠಿತ ಸರ್ಕಾರಿ ಇಂಜಿನಿಯರಿAಗ್ ಕಾಲೇಜು ಆಗಿದ್ದು, ಸಾವಿರಾರು ವಿದ್ಯಾರ್ಥಿಗಳು ಇಂಜಿನಿಯರಿAಗ್ ಪದವಿ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಂಡಿದ್ದಾರೆ. ಕಳೆದ ವರ್ಷ ನಡೆದ ಪ್ಲೇಸ್ಮೆಂಟ್ ಆಯ್ಕೆ ಪ್ರಕ್ರಿಯೆಯಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಜಾಗತಿಕ ಮತ್ತು ಖಾಸಗಿ ಕಂಪನಿಗಳಿಗೆ ನೇಮಕಗೊಂಡು ಉದ್ಯೋಗ ಮಾಡುತ್ತಿದ್ದಾರೆ ಎಂದರು.

ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಎನ್. ರಮೇಶ್ ಮಾತನಾಡಿ, ಕಾಲೇಜಿನಲ್ಲಿ ಕ್ರೀಡೆ ಮತ್ತು ಎನ್.ಎಸ್.ಎಸ್.ಚಟುವಟಿಕೆಗಳಿಗೂ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ಸಹ ಪ್ರಾಧ್ಯಾಪಕ ಡಾ. ಎಸ್. ರಂಗನಾಥ್, ಕಂಪ್ಯೂಟರ್ ವಿಭಾಗದ ಜಿ. ಶ್ರೀನಾಥ್, ಕಚೇರಿ ಅಧೀಕ್ಷಕಿ ಎಚ್.ಎ.ರೂಪಾ, ಎಂ. ಮಂಜು ಸುದ್ದಿಗೋಷ್ಟಿಯಲ್ಲಿ ಇದ್ದರು. ಇದೇ ವೇಳೆ ಸಂಸ್ಥೆಯ ಮಾಹಿತಿ ಪತ್ರ ಬಿಡುಗಡೆ ಮಾಡಲಾಯಿತು.