ಗೋಣಿಕೊಪ್ಪಲು: ಪೊನ್ನಂಪೇಟೆ ತಾಲೂಕಿನ ಮಾಯಮುಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಗೆ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶಾಸಕರು, ಪ್ರಸ್ತುತ ಸ್ಥಳೀಯ ಭಾಷೆಯೊಂದಿಗೆ ಆಂಗ್ಲ ಭಾಷೆಯು ಅತ್ಯಂತ ಮಹತ್ವ ಪಡೆದಿದ್ದು, ಬಾಲ್ಯದಿಂದಲೇ ಮಕ್ಕಳು ಆಂಗ್ಲ ಭಾಷೆ ಕಲಿತುಕೊಂಡಲ್ಲಿ ಭವಿಷ್ಯಕ್ಕೆ ಒಳ್ಳೆಯದಾಗಲಿದೆ. ಮಕ್ಕಳು ಮಾತೃಭಾಷೆಯೊಂದಿಗೆ ಆಂಗ್ಲವನ್ನು ಕಲಿತುಕೊಂಡು ತಮ್ಮ ಮುಂದಿನ ಭವಿಷ್ಯದಲ್ಲಿ ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾನಂಡ ಪ್ರತ್ಯು, ವಲಯ ಕಾಂಗ್ರೆಸ್ ಅಧ್ಯಕ್ಷ ಟಾಟು ಮೊಣ್ಣಪ್ಪ ಸೇರಿ ಇತರರು ಇದ್ದರು.