ವಿಜಯಪುರ: ಜಿಲ್ಲೆಯಾದ್ಯಂತ ಇರುವ ಶಾಲಾ&ಕಾಲೇಜಿನ ಆವರಣದಿಂದ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಉತ್ಪನ್ನಗಳ ಮಾರಾಟವಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಖಡಕ್ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2025&26ನೇ ಸಾಲಿನ ತಂಬಾಕು ನಿಯಂತ್ರಣ ಜಿಲ್ಲಾಮಟ್ಟದ ತೆಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಶಾಲಾ&ಕಾಲೇಜಿನಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚಿಸಿ ನಿಯಮಗಳನ್ವಯ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ತಂಬಾಕು ಉತ್ಪನ್ನಗಳ ಉಪಯೋಗದಿಂದ ದುಷ್ಪರಿಣಾಮ ಹಾಗೂ ಕಾಯ್ದೆಯ ಅರಿವು ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂದು ತಾಕೀತು ಮಾಡಿದರು.
ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ನಿಯಂತ್ರಣಕ್ಕೆ ತನಿಖಾ ದಳಗಳನ್ನು ರಚಿಸಿಕೊಂಡು ಕ್ರಿಯಾಶೀಲತೆಯಿಂದ ಕಾಲ ಕಾಲಕ್ಕೆ ದಾಳಿ ನಡೆಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸೂಕ್ತ ತಿಳಿವಳಿಕೆ ಹಾಗೂ ಅರಿವು ಮೂಡಿಸುವಂತೆ ತಿಳಿಸಿದರು.
ಶಾಲಾ ಶಿಣ ಸಂಸ್ಥೆಗಳು ತಂಬಾಕು ಮುಕ್ತ ಶಿಣ ಸಂಸ್ಥೆಯ ಮಾರ್ಗಸೂಚಿಗಳನ್ನು ದಾಖಲಿಸಬೇಕು. ಟೂ ಫಿಯಟ್ ತಂತ್ರಾಂಶದಲ್ಲಿ 3325ರ ಶಿಣ ಸಂಸ್ಥೆಗಳ ಪೈಕಿ 1353 ದಾಖಲಾಗಿದ್ದು, ಬಾಕಿ ಉಳಿದ 1972 ಸಂಸ್ಥೆಗಳ ಹಾಗೂ 253 ಪದವಿಪೂರ್ವ ಶಿಣ ಇಲಾಖೆ ಸಂಸ್ಥೆಗಳ ಬಾಕಿ ಉಳಿದ 50 ಸಂಸ್ಥೆಗಳ ದಾಖಲೀಕರಣಕ್ಕೆ ಅವರು ಸೂಚನೆ ನೀಡಿದರು.
ತಾಲೂಕುಗಳಲ್ಲಿ ಪ್ರತಿ ತಿಂಗಳು ಕಡ್ಡಾಯವಾಗಿ ಆಹಾರ ಸುರತೆ ಗುಣಮಟ್ಟ ಪ್ರಾಧಿಕಾರ ದಾಳಿ ಕೈಗೊಳ್ಳಬೇಕು. ತಾಲೂಕಾ ತನಿಖಾ ತಂಡ ನಿಯಮಿತವಾಗಿ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆ ನಡೆಸಬೇಕು. ಅಬಕಾರಿ ಇಲಾಖೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶಕ್ಕೆ ಅಗತ್ಯ ಸಹಕಾರ ಒದಗಿಸಬೇಕು. ಮೇ 31ರ ವಿಶ್ವ ತಂಬಾಕು ರಹಿತ ದಿನ ಆಚರಣೆ ಅಂಗವಾಗಿ ಎಲ್ಲ ತಾಲೂಕು ಕೇಂದ್ರ, ಪ್ರಾಥಮಿಕ&ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಅರಿವು&ಜಾಗೃತಿ ಮೂಡಿಸುವುದರೊಂದಿಗೆ ಕಾಯ್ದೆ ಉಲ್ಲಂಸಿದ ಪ್ರಕರಣಗಳನ್ನು ಪತ್ತೆ ಹಚ್ಚುವಂತೆ ಸೂಚಿಸಿದರು.
ಮಾರ್ಗಸೂಚಿಯನ್ವಯ ಗ್ರಾಮೀಣ ಪ್ರದೇಶಗಳಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು. ಕೊಟ್ಪಾ&2003ರ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ತಂಬಾಕು ಸೇವನೆ ತ್ಯಜಿಸಲು ಅಗತ್ಯ ಆರೋಗ್ಯ ಚಿಕಿತ್ಸೆ ಹಾಗೂ ಆಪ್ತ ಸಮಾಲೋಚನೆ (ಕೌನ್ಸೆಲಿಂಗ್) ನಡೆಸಿ, ತಂಬಾಕು ತ್ಯಜಿಸಲು ಪ್ರೇರೇಪಿಸಬೇಕು. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅಧಿಸೂಚನೆಯ ಮಾರ್ಗಸೂಚಿಯಂತೆ ಪ್ರತಿ ಗ್ರಾಮಗಳಲ್ಲಿ ಹಮ್ಮಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಗ್ರಾಮ ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಿಕೊಳ್ಳಲು ಪತ್ರ ಬರೆಯುವಂತೆ ಜಿಪಂ ಸಿಇಒ ಅವರಿಗೆ ಸೂಚಿಸಿದರು.
ಗ್ರಾಮ ಮಟ್ಟದಲ್ಲಿ ಪಂಚಾಯಿತಿ ಅಧ್ಯರ ನೇತೃತ್ವದಲ್ಲಿ ಗ್ರಾಪಂ ಸದಸ್ಯರು, ಶಾಲಾ ಶಿಕರು, ಪಿಡಿಒಗಳು, ಆಶಾ ಕಾರ್ಯಕರ್ತೆಯರು, ಸಮುದಾಯ ಆರೋಗ್ಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಸ್ವಸಹಾಯ ಸಂ, ಯುವಕ ಸಂದ ಅಧ್ಯರು, ಪ್ರತಿನಿಧಿಗಳು ಹಾಗೂ ಪ್ರಾಥಮಿಕ ಆರೋಗ್ಯ ಸುರತಾ ಅಧಿಕಾರಿಗಳನ್ನೊಳಗೊಂಡ ಗ್ರಾಮ ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಿ ತಂಬಾಕು ಸೇವೆನಯಿಂದಾಗುವ ದುಷ್ಪರಿಣಾಮಗಳ ಹಾಗೂ ಲಭ್ಯವಿರುವ ಆರೋಗ್ಯ ಮಾಹಿತಿ ಒದಗಿಸುವುದು. ಅಲ್ಲದೆ, ಕೊಟ್ಪಾ&2003ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು.
ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಶಸ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಅಶೋಕ ೂಣಸಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ. ಸೌದಾಗರ, ಡಿಎಚ್ಒ ಡಾ. ಸಂಪತ್ ಗುಣಾರಿ, ಜಿಪಂ ಮುಖ್ಯ ಲೆಕ್ಕಪತ್ರಾಧಿಕಾರಿ ರಾಮಣ್ಣ ಅಥಣಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶಾಧಿಕಾರಿ ಅಪ್ಪಾಸಾಹೇಬ ಇನಾಂದಾರ, ಬಸವನಬಾಗೇವಾಡಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಕವಿತಾ ಮತ್ತಿತರರಿದ್ದರು.