ಕೋಟ: ಯುವಜನಾಂಗ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಹೊಂದಬೇಕು. ಆದರೆ ಯಾವುದೋ ಸಾವಾಜಿಕ ಜಾಲತಾಣಗಳ ಸುಳ್ಳು ಸುದ್ದಿಗಳು, ಕಾಲ್ಪನಿಕ ಕಥೆಗಳನ್ನು ನಂಬಿಕೊಂಡು ಕೆಟ್ಟ ಪ್ಯಾಷನ್‌ನೊಂದಿಗೆ ಈ ರಂಗಕ್ಕೆ ಬರುವುದಕ್ಕಿಂತ ಒಳ್ಳೆ ವಿಷನ್‌ನ್ನು ಇಟ್ಟುಕೊಂಡು ಉತ್ತಮ ವಿಚಾರಗಳನ್ನು ಮೈಗೂಡಿಸಿಕೊಂಡು ಪತ್ರಿಕೋದ್ಯಮಕ್ಕೆ ಬರಬೇಕು ಎಂದು ಪತ್ರಕರ್ತ ಲಕ್ಷ್ಮಿಮಚ್ಚಿನ ಹೇಳಿದರು.
ಮಣೂರು ಪಡುಕರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂ ಆಶ್ರಯದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕಾ ದಿನದ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಿರಿಯ ಪತ್ರಕರ್ತ ಯು.ಎಸ್.ಶೆಣೈ ವಾತನಾಡಿ, ಪತ್ರಿಕೋದ್ಯಮದಲ್ಲಿ ಯುವಜನತೆಗೆ ಉತ್ತಮ ಅವಕಾಶವಿದೆ. ಆದರೆ ರಂಗದಲ್ಲಿ ಒಂದಷ್ಟು ಸವಾಲುಗಳಿರುವುದುರಿಂದ ಒಂದಷ್ಟು ಅಧ್ಯಯನ ವಾಡಿ, ಒಳಿತು-ಕೆಡುಕುಗಳನ್ನು ತಿಳಿದು ಈ ಕ್ಷೇತ್ರ ಆಯ್ಕೆ ವಾಡಿಕೊಳ್ಳಿ ಎಂದರು.
ಪಡುಕರೆ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡೆನ್ನಿಸ್ ಬಾಂಜ್ ಕಾರ್ಯಕ್ರಮ ಉದ್ಘಾಟಿಸಿದರು. ಬ್ರಹ್ಮಾವರ ಸಂದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ ಅಧ್ಯಕ್ಷತೆ ವಹಿಸಿದ್ದರು.
ಹಿರಿಯ ವರದಿಗಾರ, ಕಾರ್ಕಳ ಪತ್ರಕರ್ತರ ಸಂ ವಾಜಿ ಅಧ್ಯಕ್ಷ ಪೇತ್ರಿ ಭಾಸ್ಕರ ರಾವ್ ಅವರಿಗೆ ಪತ್ರಿಕಾ ದಿನಾಚರಣೆ ಪುರಸ್ಕಾರ ಹಾಗೂ ಕರ್ನಾಟಕ ರಾಜ್ಯ ವಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದ ಯು.ಎಸ್.ಶೆಣೈ ಅವರನ್ನು ಗೌರವಿಸಲಾಯಿತು.
ಉಡುಪಿ ಜಿಲ್ಲಾ ಸಂ ಅಧ್ಯಕ್ಷ ಅಲೆವೂರು ರಾಜೇಶ್ ಶೆಟ್ಟಿ, ಬ್ರಹ್ಮಾವರ ತಾಲೂಕು ಕಾರ್ಯದರ್ಶಿ ಹರೀಶ್ ಕಿರಣ್ ತುಂಗ, ಸದಸ್ಯರಾದ ರವೀಂದ್ರ ಕೋಟ, ಪ್ರವೀಣ್ ಮುದ್ದೂರು, ಗಣೇಶ್ ಸಾಬ್ರಕಟ್ಟೆ, ಪ್ರವೀಣ್ ಕುವಾರ್, ಇಬ್ರಾಹಿಂ ಸಾಹೇಬ್, ಉಪಸ್ಥಿತರಿದ್ದರು.
ಸಂದ ಸದಸ್ಯ ಮೋಹನ್ ಉಡುಪ ಸ್ವಾಗತಿಸಿದರು. ಹರೀಶ್ ಕಿರಣ್ ತುಂಗ ವಂದಿಸಿದರು. ಬಂಡೀಮಠ ಶಿವರಾಮ ಆಚಾರ್ಯ ಹಾಗೂ ಕೆ.ಜಿ.ವೈದ್ಯ ಸವ್ಮಾನಿತರನ್ನು ಪರಿಚಯಿಸಿದರು. ಪ್ರಭಾಕರ ಆಚಾರ್ಯ ನಿರೂಪಿಸಿದರು.