ಬಳ್ಳಾರಿ : ಪರಿಶಿಷ್ಟ ವರ್ಗಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸ್ತಕ ಸಾಲಿನ 5 ನೇ ತರಗತಿಯಲ್ಲಿ ಶೇ.60% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ 6 ನೇ ತರಗತಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳ ಪ್ರವೇಶಾತಿಗೆ ಮೇ 09 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ರವರೆಗೆ ನಗರದ ಅಂಚೆ ಕಚೇರಿ ಪಕ್ಕದ ಸರ್ಕಾರಿ ಬಾಲಕೀಯರ ಜೂನಿಯರ್ ಕಾಲೇಜಿನಲ್ಲಿ ಅರ್ಹತಾ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.ಮಾಹಿತಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-242453, ಮೊ.9986302091 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------