ಜಿಲ್ಲೆ

ಪ್ರವೇಶ ತರಬೇತಿ ಕಾರ್ಯಾಗಾರ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ಸಂವಿಧಾನ ದಿನ ನಿಮಿತ್ತ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ., ಸಮಾಜ ಕಲ್ಯಾಣ ಇಲಾಖೆ, ಧಾರವಾಡ ವಕೀಲರ ಸಂಘ, ಅಭಿಯೋಜನೆ ಇಲಾಖೆ ಹಾಗೂ ಪೊಲೀಸ್​ ಇಲಾಖೆ ಆಶ್ರಯದಲ್ಲಿ ಅರೆ ಕಾಲಿಕ ಕಾನೂನು ಸ್ವಯಂ ಸೇವಕರವರಿಗೆ ಒಂದು ದಿನದ ಪ್ರವೇಶ ತರಬೇತಿ ಕಾರ್ಯಾಗಾರವನ್ನು ನ. 26ರಂದು ಬೆಳಗ್ಗೆ 10 ಗಂಟೆಗೆ ಜಿಪಂ ಸಭಾಭವನದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಬಿ.ಜಿ. ರಮಾ ಕಾರ್ಯಕ್ರಮ ಉದ್ಘಾಟಿಸುವರು. ಹು-ಧಾ ಪೊಲೀಸ್​ ಆಯುಕ್ತ ಎನ್​. ಶಶಿಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ, ಕರ್ನಾಟಕ ವಕೀಲರ ಪರಿಷತ್​ ಸದಸ್ಯ ಎ.ಎ.ಮಗದುಮ್​, ವಿ.ಡಿ.ಕಾಮರೆಡ್ಡಿ, ಅಶೋಕ ಏಣಗಿ, ಜಿ.ಜಿ.ಅಮೋಘಿಮಠ, ಸ್ಮಿತಾ ಗಿರಗಾವಿ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.