ದೊಡ್ಡಬಳ್ಳಾಪುರ ತಾಲೂಕು ದೊಡ್ಡಬೆಳವಂಗಲದ ಜ್ಞಾನವಾಹಿನಿ ಪ್ರೌಢಶಾಲೆಯಲ್ಲಿ ವಿಶ್ವಪರಿಸರ ದಿನ ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ ಕುಮಾರಿ, ಆಡಳಿತಾಧಿಕಾರಿ ಬಿ.ಕೆ.ಬಿಂದು, ಶಿಕ್ಷಕರಾದ ವಿಜಯಲಕ್ಷ್ಮಿ, ಗಾನಶ್ರೀ, ಶ್ವೇತಾ ಉಮಾದೇವಿ ಮತ್ತಿತರರಿದ್ದರು. 
ಜಿಲ್ಲೆ

ಎಲ್ಲರಲ್ಲೂ ಪರಿಸರ ಜಾಗೃತಿ ಅವಶ್ಯ

ಶಿವರಾಜ.ಎಂ

ವಿಜಯವಾಣಿ ಸುದ್ದಿಜಾಲ ಮಧುರೆ
ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಪರಿಸರ ದಿನ ಆಚರಿಸಲಾಗುತ್ತಿದೆ. ಪ್ರತಿಯೊಬ್ಬರು ಪರಿಸರದ ಬಗ್ಗೆ ಜಾಗೃತಿ ಮೂಡಿಸಿಕೊಂಡು ಪರಿಸರ ರಕ್ಷಣೆಗೆ ಮುಂದಾಗಬೇಕು ಎಂದು ಜ್ಞಾನವಾಹಿನಿ ಆಂಗ್ಲ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜ್ಯೋತಿ ಕುಮಾರಿ ಹೇಳಿದರು.
ದೊಡ್ಡಬೆಳವಂಗಲದ ಜ್ಞಾನವಾಹಿನಿ ಆಂಗ್ಲ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ದಿನಾಚರಣೆಯಲ್ಲಿ ಮಾತನಾಡಿದರು. ಮಾನವ ಚಟುವಟಿಕೆಗಳ ಮೂಲಕ ಪರಿಸರಕ್ಕೆ ಹಾನಿಯಾಗದಂತೆ ತಡೆಯಲು ಮತ್ತು ಭೂಮಿಯನ್ನು ರಕ್ಷಿಸುವ ಗುರಿಯೊಂದಿಗೆ ಪರಿಸರ ದಿನ ಆಚರಿಸಲಾಗುತ್ತಿದೆ. ಜಾಗತಿಕ ತಾಪಮಾನ ಇಂದು ಗಂಭೀರ ಸಮಸ್ಯೆಯಾಗಿದ್ದು, ಎಚ್ಚೆತ್ತುಕೊಳ್ಳಲಿದ್ದರೆ ಭವಿಷ್ಯ ಕರಾಳವಾಗಲಿದೆ. ಆದ್ದರಿಂದ ಜಾಗತಿಕ ತಾಪಮಾನವನ್ನು ತಡೆಗಟ್ಟುವುದು ಮತ್ತು ನಮ್ಮ ಪರಿಸರವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಪ್ಲಾಸ್ಟಿಕ್ ತ್ಯಜಿಸಿ: ಪರಿಸರಕ್ಕೆ ಮಾರಕವಾಗಿರುವ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಯಾರೂ ಬಳಕೆ ಮಾಡಬಾರದು, ಬಳಕೆ ಮಾಡುವವರಿಗೆ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಶಾಲೆಯ ಆಡಳಿತಾಧಿಕಾರಿ ಬಿ.ಕೆ.ಬಿಂದು ಹೇಳಿದರು. ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಪೋಷಿಸಬೇಕು, ವಿಶ್ವಪರಿಸರ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಬಾರದು, ಇದು ಕಾರ್ಯರೂಪಕ್ಕೆ ಬರಬೇಕು. ವಿದ್ಯಾರ್ಥಿಗಳು ತಮ್ಮ ಪಾಲಕರಿಗೂ ಈ ಬಗ್ಗೆ ಅರಿವು ಮೂಡಿಸುವ ಮೂಲಕ ಪರಿಸರಕ್ಕೆ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ಜಾಗೃತಿ ಜಾಥಾ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳೊಂದಿಗೆ ರಸ್ತೆಯಲ್ಲಿ ಜಾಗೃತಿ ಜಾಥಾ ನಡೆಸಿದರು. ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸಿ ಸಸಿ ನೆಟ್ಟು ಪೋಷಿಸುವಂತೆ ಮನವಿ ಮಾಡಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಉಳಿಸಿ, ಕಾಡು ರಕ್ಷಿಸಿ, ಪ್ಲಾಸ್ಟಿಕ್ ತ್ಯಜಿಸಿ ಮತ್ತಿತರ ೋಷವಾಕ್ಯಗಳ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.