ಕೊಳ್ಳೇಗಾಲ: ತಾಲೂಕಿನ ಚಿಲಕವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪ್ರೌಢಶಾಲೆಯ ಆವರಣದಲ್ಲಿ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಪರಿಸರ ಮಾಹಿತಿ ಹಾಗೂ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ವಲಯ ಮೇಲ್ವಿಚಾರಕಿ ಭವ್ಯಾ ಮಾತನಾಡಿ, ಮಕ್ಕಳು ಶಿಕ್ಷಣಕ್ಕೆ ಕೊಡುವ ಪ್ರಾಮುಖ್ಯತೆಯನ್ನು ಪರಿಸರ ಉಳಿವಿಗೂ ನೀಡಬೇಕು. ಗಿಡ, ಮರಗಳ ಪೋಷಣೆಗೆ ಹೆಚ್ಚು ಒತ್ತು ನೀಡಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಆವರಣದಲ್ಲಿ ಗಿಡ ನೆಡಲಾಯಿತು. ಆಸಕ್ತ ಸಂಘದ ಸದಸ್ಯರಿಗೆ ಹಾಗೂ ಮಕ್ಕಳಿಗೆ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್, ಸಹ ಶಿಕ್ಷಕ ಪಿಳ್ಳಪ್ಪ, ಅನಿತಾ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ಸದಸ್ಯರು ಹಾಗೂ ಶಾಲಾ ಮಕ್ಕಳು ಇದ್ದರು.