ಹುಬ್ಬಳ್ಳಿ : ಇಲ್ಲಿನ ಗದಗ ರಸ್ತೆಯಲ್ಲಿರುವ ನೈಋತ್ಯ ರೈಲ್ವೆಯ ಪ್ರಧಾನ ಕಚೇರಿ ರೈಲ್ ಸೌಧದ ಆವರಣದಲ್ಲಿ ಗುರುವಾರ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರ್, ಪರಿಸರ ಸುಸ್ಥಿರತೆಯನ್ನು ರಕ್ಷಿಸುವ, ಸಂರಕ್ಷಿಸುವ ಮತ್ತು ಉತ್ತೇಜಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ರೈಲ್ ಸೌಧದ ಆವರಣದಲ್ಲಿ ಸಸಿ ನೆಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ನೈಋತ್ಯ ರೈಲ್ವೆಯ ವಾರ್ಷಿಕ ಸುಸ್ಥಿರತಾ ಕೈಪಿಡಿ2025 ಅನ್ನು ಪ್ರಧಾನ ವ್ಯವಸ್ಥಾಪಕರು ಬಿಡುಗಡೆ ಮಾಡಿದರು. ಈ ಕೈಪಿಡಿಯಲ್ಲಿ ನೈಋತ್ಯ ರೈಲ್ವೆಯು ನೀರು ಮತ್ತು ವಾಯು ಮಾಲಿನ್ಯ ನಿಯಂತ್ರಣ ಹಾಗೂ ತ್ಯಾಜ್ಯ ನಿರ್ವಹಣೆಯಲ್ಲಿ ಕೈಗೊಂಡ ಪ್ರಮುಖ ಉಪಕ್ರಮಗಳನ್ನು ಪ್ರಸ್ತುತಪಡಿಸಲಾಗಿದೆ.