ಕೋಟ: ಕುಂದಾಪುರ ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ಘಟಕದ ಸಹಯೋಗದಲ್ಲಿ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಪ್ರಾಚಾರ್ಯ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಲಾಯಿತು. ಕಾಲೇಜು ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಶೇಖರ್, ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಸಂತೋಷ ನಾಯ್ಕ ಎಚ್., ಗ್ರಂಥಪಾಲಕ ರವಿಚಂದ್ರ ಎಚ್.ಎಸ್. ಉಪಸ್ಥಿತರಿದ್ದರು. ಇಕೋ ಕ್ಲಬ್ ಸಂಚಾಲಕ ನಾಗರಾಜ ಯು. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ಸುದರ್ಶನ ಮತ್ತು ಪ್ರಜ್ವಲ್ ಸಿ.ಎಂ. ಸಸಿಗಳನ್ನು ನೀಡಿದರು. ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಶೇಖರ್ ವಂದಿಸಿದರು.