ಅಳವಂಡಿ: ದೈನಂದಿನ ಜೀವನದಲ್ಲಿ ಎಲ್ಲರೂ ತಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಬೇಕಿದ್ದು, ಜೊತೆಗೆ ಗಿಡಗಳನ್ನು ಬೆಳಸುವ ಮೂಲಕ ಪರಿಸರ ಸಮತೋಲನ ಕಾಪಾಡಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಲಯ ಮೇಲ್ವಿಚಾರಕ ಮೋಟಯ್ಯ ಹೇಳಿದರು.
ಸಮೀಪದ ಗುಡಗೇರಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಗ್ರಾಮಸ್ಥರಿಗೆ ವಿವಿಧ ತಳಿಯ ಗಿಡಗಳನ್ನು ವಿತರಿಸಿ ಭಾನುವಾರ ಮಾತನಾಡಿದರು.ಗಿಡ ಮರಗಳನ್ನು ಕಡಿಯುವುದರಿಂದ ಪರಿಸರದಲ್ಲಿ ಅಸಮತೋಲನ ಉಂಟಾಗಿ ಅತಿವೃಷ್ಟಿ, ಅನಾವೃಷ್ಟಿ ಉಂಟಾಗಲಿದೆ. ಇದು ಜನ ಜೀವನದ ಮೇಲೆ ಗಂಭಿರ ಪರಿಣಾಮ ಉಂಟಾಗಲಿದೆ. ಕಾರಣ ಎಲ್ಲರೂ ಪರಿಸರ ಜಾಗೃತಿ ಬೆಳೆಸಿಕೊಳ್ಳಬೇಕು ಹಾಗೂ ಗಿಡಮರಗಳನ್ನು ಬೆಳೆಸಬೇಕು. ಪರಿಸರ ನಾಶದಿಂದ ಅಂತರ್ಜಲ ಮಟ್ಟ ಕಡಿಮೆಯಾಗಿ ನೀರಿನ ಬರ ಉಂಟಾಗುತ್ತದೆ. ಇಂದಿನಿಂದಲೇ ಪರಿಸರ ಸಂರಕ್ಷಣೆಯಲ್ಲಿ ಜಾಗೃತಿಗೊಂಡರೆ ಮುಂದಿನ ಪೀಳಿಗೆಗೆ ಉತ್ತಮ ಕೊಡುಗೆಯಾಗಲಿದೆ ಎಂದರು.
ಎಸ್‌ಕೆಡಿಆರ್‌ಡಿಪಿ ಕೃಷಿ ಮೇಲ್ವಿಚಾರಕ ಅಶೋಕ, ಮುಖ್ಯ ಶಿಕ್ಷಕ ಹನುಮಂತಪ್ಪ, ಪ್ರಮುಖರಾದ ಹಾಲಪ್ಪ, ಲೀಲಾವತಿ, ವೆಂಕಣ್ಣ, ಪಂಪಣ್ಣ, ಶರಣಪ್ಪ, ಸೇವಾ ಪ್ರತಿನಿಧಿ ನೇತ್ರಾವತಿ, ಸ್ವಸಹಾಯ ಸಂಘದ ಪದಾಧಿಕಾರಿಗಳು ಇದ್ದರು.